ಎಷ್ಟೇ ದೊಡ್ಡ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ; ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯ ನಿರ್ವಹಿಸೋಣ, ಭರವಸೆಯನ್ನು ಕಳೆದುಕೊಳ್ಳದಿರಿ

ರಾಷ್ಟ್ರೀಯ

ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಎಂದಿಗೂ ಭರವಸೆಯನ್ನು ಕಳೆದುಕೊಳ್ಳದಿರಿ.

ನಿಷ್ಠಾವಂತ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದು, ಕುಮಾರ ಸ್ವಾಮಿಯ ಒಂದು ಆರೋಪಕ್ಕೆ ಎಡಿಜಿಪಿ ಚಂದ್ರಶೇಖರ್ ಅವರು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದರು. ಕುಮಾರಸ್ವಾಮಿಯ ಆರೋಪಕ್ಕೆ ಇದೀಗ ಚಂದ್ರಶೇಖರ್ ಟಾಂಗ್ ನೀಡಿದ್ದಾರೆ. ತಮ್ಮ ಸಿಬ್ಬಂದಿಗೆ ಪತ್ರದ ಮೂಲಕ ಎಡಿಜಿಪಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಪ್ರಕರಣ ಒಂದರ ಆರೋಪಿ ಎಂದು ಪತ್ರ ಪ್ರಾರಂಭಿಸಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ನನ್ನ ಮೇಲೆ ಹೆಚ್‍ಡಿ ಕುಮಾರಸ್ವಾಮಿ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ. ಎಸ್‌ಐಟಿ ಸಮಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿದೆ. ಆರೋಪಿ ಹೆಚ್‍ಡಿ ಕುಮಾರಸ್ವಾಮಿ ಜಾಮೀನು ಪಡೆದಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಹಾಗೂ ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರು ಆತನೊಬ್ಬ ಆರೋಪಿ. ಇಂಥ ಆರೋಪ ಮತ್ತು ಬೆದರಿಕೆಗಳಿಂದ ನಾವು ನಿರಾಶೆಗೊಳ್ಳಬಾರದು. ಎಸ್‌ಐಟಿ ಮುಖ್ಯಸ್ಥನಾಗಿ ನಾನು ಭಯವಿಲ್ಲದೆ ಕೆಲಸ ಮಾಡುತ್ತೇನೆ.
ಪ್ರಕರಣದ ಸತ್ಯಸತತೆ ಹೊರಗೆ ತರುತ್ತೇನೆ. ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನು ರಕ್ಷಿಸುತ್ತೇನೆ ಎಂದು ಎಸ್‌ಐಟಿ ಅಧಿಕಾರಿ ಚಂದ್ರಶೇಖರ್ ತಮ್ಮ ಸಿಬಂದಿಗಳಿಗೆ ಭರವಸೆ ನೀಡಿದ್ದಾರೆ.

ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕರಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ ಎಂದಿದ್ದಾರೆ. ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ. ಕೆಲವೊಮ್ಮೆ ಅಪರಾಧಿಗಳು, ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ಇದು ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಎಂದಿಗೂ ಭರವಸೆಯನ್ನು ಕಳೆದುಕೊಳ್ಳದಿರಿ. ಏಕೆಂದರೆ ಸತ್ಯವು ಯಾವಾಗಲೂ ಜಯಗಳಿಸುತ್ತದೆ. ಸತ್ಯ, ದೇವರು ಮತ್ತು ನಮ್ಮ ಕಾನೂನಿನಲ್ಲಿ ನಂಬಿಕೆ ಇರಲಿ. ಸತ್ಯಮೇವ ಜಯತೆ ಎಂದು ಪತ್ರದ ಮೂಲಕ ಚಂದ್ರಶೇಖರ್ ಸ್ಪಷ್ಟಣೆ ನೀಡಿದ್ದಾರೆ. ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಆತ ಆರೋಪಿಯೇ. ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸೋಣಾ. ಅದನ್ನು ಯಾರಿಂದಲೂ ತಡಿಯಲು ಸಾಧ್ಯವಿಲ್ಲ. ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನು ರಕ್ಷಿಸುತ್ತೇನೆ ಎಂದು ಎಸ್ ಐಟಿ ಅಧಿಕಾರಿ ಚಂದ್ರಶೇಖರ್ ತಮ್ಮ ಸಿಬ್ಬಂದಿಗೆ ಅಭಯ ನೀಡಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿಗೆ ಜಾರ್ಜ್ ಬರ್ನಾಡ್ ಶಾ ಅವರ ಪ್ರಸಿದ್ಧ ಇಂಗ್ಲಿಷ್ ಸಾಲನ್ನು ಬಳಸಿರುವ ಚಂದ್ರಶೇಖರ್, ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ. ಹೀಗಾಗಿ ನಾವು ಹಂದಿಗಳ ಜೊತೆ ಜಗಳ ಮಾಡಬಾರದು ಎಂದು ಹೇಳಿರುವ ಚಂದ್ರಶೇಖರ್ ಕೊನೆಯಲ್ಲಿ ಸತ್ಯಮೇವ ಜಯತೆ ಎಂದು ಪತ್ರದಲ್ಲಿ ಬರೆದಿದ್ದಾರೆ.