ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯಲ್ಲಿದ್ದ ಭಾರಿ ಗಾತ್ರದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಎರಡು ಸುರಕ್ಷತಾ ಬೆಲೂನುಗಳೂ ಓಪನ್ ಆಗಿದ್ದರಿಂದಾಗಿ ಚಾಲಕ ಮತ್ತು ಪ್ರಯಾಣಿಕರು ಅದೃಷ್ಟವಶಾತ್ ಬಚಾವಾಗಿದ್ದಾರೆ.
