ಪೂರ್ವದ್ಚೇಷದ ಹಿನ್ನೆಲೆಯಲ್ಲಿ ಹತ್ತಕ್ಕೂ ಹೆಚ್ಚು ಯುವಕರ ತಂಡ ಇಬ್ಬರ ಮೇಲೆ ದಾಳಿ ನಡೆಸಿ ಪರಾರಿಯಾದ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ. ತಲವಾರು ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ
ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಎಂಬಿಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ.
ಅಮ್ಮೆಮಾರ್ ನಿವಾಸಿ ತಸ್ಲೀಮ್, ಮಹಮ್ಮದ್ ಶಾಕೀರ್, ನಾಸೀರ್, ಸಿಯಾಬು, ಸೈಫುದ್ದೀನ್ ಅವರು ಮಾತನಾಡುತ್ತಿದ್ದ ವೇಳೆ ತಸ್ಲೀಮ್ ಗೆ ಕರೆಯೊಂದು ಬಂದಿದ್ದು, ಈ ವೇಳೆ ಆರೋಪಿಯು ಅವಾಚ್ಯ ಶಬ್ದಗಳಿಂದ ಬೈದು ನಾಲ್ಕು ಮಾರ್ಗಕ್ಕೆ ಬರುವಂತೆ ಸವಾಲು ಒಡ್ಡಿದ್ದಾನೆ. ಅಮ್ಮೆಮಾರ್ ಶಾಲಾ ಬಳಿಗೆ ಹೋದಾಗ, ಆರೋಪಿ ಮನ್ಸೂರ್ ಹಾಗೂ ಇತರರಿದ್ದು, ಈ ವೇಳೆ ಪಲ್ಟಿ ಇಮ್ರಾನ್ ತಲವಾರಿನಿಂದ ತಸ್ಲೀಮ್ ನ ಬಲ ಕಾಲು, ಮತ್ತೋರ್ವ ಆರೋಪಿ ಮುಸ್ತಾಕನು ಬಲಗೈಗೆ ಕಡಿದಿದ್ದು, ಸರ್ಫುದ್ದೀನ್ ಕಲ್ಲಿನಿಂದ ಹೊಡೆದಿದ್ದಾನೆ. ಈ ವೇಳೆ ತಸ್ಲೀಮ್ ನೆಲಕ್ಕೆ ಬಿದ್ದಾಗ ಮನ್ಸೂರ್ ಮುಖಕ್ಕೆ ಕಡಿದಿದ್ದಾನೆ. ಜೊತೆಗೆ ಆರೋಪಿಗಳು ಮಹಮ್ಮದ್ ಶಾಕೀರ್ ಗೂ ಅದೇ ರೀತಿ ತಲವಾರಿನಿಂದ ಕಡಿದಿದ್ದಾನೆ.
ಜೊತೆಗೆ ಆಶ್ರಫ್, ರಿಜ್ವಾನ್ ಮತ್ತು ಲತೀಫ್ ಮರದ ದೊಣ್ಣೆಯಿಂದ ಹೊಡೆದಿದ್ದಾರೆ.

ಮನ್ಸೂರ್, ಪಲ್ಟಿ ಇಮ್ರಾನ್, ಮುಸ್ತಾಕ್@ಮಿಚ್ಚ, ಸರ್ಪುದ್ದೀನ್, ಅಶ್ರಫ್, ರಿಜ್ವಾನ್, ಸಫ್ವಾನ್, ಅದ್ನಾನ್, ನಿಸಾಕ್, ಯಾಸೀರ್, ಸುಹೈಲ್, ಜಾಹೀದ್, ಸಾದಿಕ್, ಲತೀಫ್ ಎಂಬವರ ವಿರುದ್ಧ ಗಾಯಾಳುಗಳು ಹೇಳಿಕೆ ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
