ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಬೆದರಿಕೆ ಪ್ರಕರಣ: ಮಾನಸಿಕ ರೋಗಿ ಪಾತಿಮಾ ಖಾನ್ ಬಂಧನ

ರಾಷ್ಟ್ರೀಯ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಬೆದರಿಕೆ ಹಾಕಿದ್ದು ಹತ್ತು ದಿನಗಳೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಬಾಬಾ ಸಿದ್ಧಿಕಿ ಕೊಲೆ ಮಾಡಿದ ರೀತಿಯಲ್ಲಿ ನಿಮ್ಮನ್ನೂ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆಯನ್ನು ಫಾತಿಮಾ ಖಾನ್‌ ಎಂದು ಗುರುತಿಸಲಾಗಿದೆ.

ಮಾಹಿತಿ ತಂತ್ರಜ್ಞಾನದಲ್ಲಿ ಬಿಎಸ್ಸಿ ಮಾಡಿರುವ ಫಾತಿಮಾ ಖಾನ್ ತನ್ನ ಕುಟುಂಬ ಸದಸ್ಯರೊಂದಿಗೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸ್‌ನಗರ ಪ್ರದೇಶದಲ್ಲಿ ನೆಲೆಸಿದ್ದಾಳೆ ಎಂಬುದು ತಿಳಿದಿದೆ. ತನಿಖೆಯಲ್ಲಿ ಆಕೆ ಮಾನಸಿಕ ರೋಗದಿಂದ ಬಳಲುತ್ತಿದ್ದಾಳೆ ಎಂದು ತಿಳಿದು ಬಂದಿದೆ.

ಆರೋಪಿ ಫಾತಿಮಾ ಮುಂಬೈ ನಗರ ಪೊಲೀಸ್ ಟ್ರಾಫಿಕ್ ಕಂಟ್ರೋಲ್ ರೂಂಗೆ ಬೆದರಿಕೆ ಸಂದೇಶ ಕಳುಹಿಸಿದ್ದಳು. ಸಂದೇಶದಲ್ಲಿ “ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಬೆದರಿಕೆ ಹಾಕಿದ್ದು 10 ದಿನಗಳೊಳಗೆ ಸಿಎಂ ಸ್ಥಾನದಿಂದ ಕೆಳಗಿಳಿಯದಿದ್ದರೆ ಬಾಬಾ ಸಿದ್ಧಿಕಿ ಕೊಲೆ ಮಾಡಿದ ರೀತಿಯಲ್ಲಿ ನಿಮ್ಮನ್ನೂ ಕೊಲೆ ಮಾಡುತ್ತೇವೆ ಎಂದು ಕಳುಹಿಸಿದ್ದಳು.