ಜಾರ್ಖಂಡ್ ‌ನಲ್ಲಿ ಆದಾಯ ತೆರಿಗೆ ಇಲಾಖೆ ದಾಳಿ, ಸಿಎಂ ಹೇಮಂತ್ ಸೋರೆನ್ ಆಪ್ತರ ಬಳಿ ಶೋಧ

ರಾಷ್ಟ್ರೀಯ

ರಾಂಚಿ: ತೆರಿಗೆ ವಂಚನೆ ತನಿಖೆಯ ಭಾಗವಾಗಿ ಆದಾಯ ತೆರಿಗೆ ಇಲಾಖೆ ಶನಿವಾರ ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ಗೆ ಸಂಪರ್ಕ ಹೊಂದಿರುವ ವ್ಯಕ್ತಿಯ ಆವರಣ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂಜಾನೆ ಆರಂಭವಾದ ಕಾರ್ಯಾಚರಣೆಯಲ್ಲಿ ರಾಜ್ಯದ ರಾಜಧಾನಿ ರಾಂಚಿ ಮತ್ತು ಜೆಮ್‌ಶೆಡ್‌ಪುರದ ಒಟ್ಟು ಒಂಬತ್ತು ಆವರಣಗಳ ಮೇಲೆ ದಾಳಿ ನಡೆಸಲಾಗಿದೆ. ಸಿಆರ್‌ಪಿಎಫ್‌ನ ಭದ್ರತಾ ತಂಡವೊಂದು ಐಟಿ ದಾಳಿಗೆ ನೆರವು ನೀಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಆಪ್ತರಾಗಿರುವ ಸುನೀಲ್ ಶ್ರೀವಾಸ್ತವ್ ಅವರಿಗೆ ಸಂಬಂಧಿಸಿದ ಸ್ಥಳಗಳನ್ನೂ ಶೋಧಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ವ್ಯಾಪಾರ ಮತ್ತು ಗಣಿಗಾರಿಕೆ ಕುರಿತು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದ ಇತ್ತೀಚಿನ ತನಿಖೆಗಳಿಗೆ ಈ ಕ್ರಮವು ಸಂಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ನಾಯಕ ರಾಕೇಶ್ ಸಿನ್ಹಾ, “ಜಾರ್ಖಂಡ್‌ಗೆ ಇದು ಹೊಸದೇನಲ್ಲ. ರಾಜ್ಯದಲ್ಲಿ ಪ್ರತಿಪಕ್ಷ ನಾಯಕರು ಮತ್ತು ಅವರ ಸಿಬ್ಬಂದಿಗಳ ಮೇಲೆ ಐಟಿ ದಾಳಿಗಳು ಹೆಚ್ಚಾಗಿ ನಡೆಯುತ್ತವೆ. ಚುನಾವಣೆಗೆ ಮುನ್ನವೇ ಐಟಿ ಮತ್ತು ಇಡಿ ದಾಳಿಗಳ ಮೂಲಕ ಬಿಜೆಪಿ ತನ್ನ ನೆಲೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇಂತಹ ಕ್ರಮಗಳ ಮೂಲಕ ಅವರು ವಿರೋಧ ಪಕ್ಷದ ನಾಯಕರ ಮೇಲೆ ಒತ್ತಡ ಹೇರಲು ಪ್ರಯತ್ನಿಸುತ್ತಿದ್ದಾರೆ.