ಪುತ್ತೂರು-ವಿಟ್ಲ-ಕುಳಾಲು ಮಧ್ಯೆ ಸಂಚರಿಸುವ ಪುತ್ತೂರು ಡಿಪೋಗೆ ಸೇರಿದ KA19F2951 ಸಂಖ್ಯೆಯ ಸರ್ಕಾರಿ ಬಸ್ ನಿರ್ವಾಹಕನಿಗೆ ಪ್ರಯಾಣಿಕನೊಬ್ಬ ಕಪಾಳಮೋಕ್ಷ ಮಾಡಿದ್ದಾನೆ. ಚಿಲ್ಲರೆ ಹಣದ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ನಿರ್ವಾಹಕನ ಮೇಲೆ ಪ್ರಯಾಣಿಕ ಏಕಾಏಕಿ ಹಲ್ಲೆ ನಡೆಸಿದ್ದಾನೆ.
ತಕ್ಷಣವೇ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ವಿಟ್ಲ ಠಾಣೆಯ ಮುಂದೆ ರಸ್ತೆಯಲ್ಲಿ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಪ್ರಯಾಣಿಕ ಯಾರು, ಎಲ್ಲಿಯವನೆಂಬ ಬಗ್ಗೆ ಪೊಲೀಸ್ ವಿಚಾರಣೆಯಿಂದ ತಿಳಿದು ಬರಬೇಕಾಗಿದೆ.
