ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿ ತಿರಸ್ಕೃತ

ಕರಾವಳಿ

ಮಳಲಿ ಮಸೀದಿಯ ಜಮೀನಿನ ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ (ಎ.ಸಿ ಕೋರ್ಟ್) ನ್ಯಾಯಾಲಯ ತಿರಸ್ಕರಿಸಿದೆ.

ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದಲ್ಲಿ ಉಂಟಾಗಿರುವ ವಕ್ಫ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ದಾಖಲೆ ಬದಲಾಯಿಸಬಾರದು. ಈ ಬಗ್ಗೆ ಸಿವಿಲ್‌ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ ಪ್ರಕ್ರಿಯೆ ನಡೆಸಬಾರದು ಎಂದು ವಿಹಿಂಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ಇದೀಗ ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ಸಹಾಯಕ ಆಯುಕ್ತರು ತಿರಸ್ಕರಿಸಿದ್ದಾರೆ.