ಚುನಾವಣಾ ಬಾಂಡ್ ಹಗರಣ: ನಳಿನ್ ಕುಮಾರ್ ಕಟೀಲ್ FIR ರದ್ದುಗೊಳಿಸಿದ ಹೈಕೋರ್ಟ್

ಕರಾವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಸದ್ದು ಮಾಡಿದ್ದ ಸಂದರ್ಭ, ಮುಖ್ಯಮಂತ್ರಿ ವಿರುದ್ಧವೇ ಎಫ್ ಐ ಆರ್ ದಾಖಲಾಗಿ ಬಿಜೆಪಿ ರಾಜೀನಾಮೆ ನೀಡುವಂತೆ ಸಿದ್ದರಾಮಯ್ಯರನ್ನು ಆಗ್ರಹಿಸುತ್ತಿದ್ದ ಸಂದರ್ಭ ಇದಕ್ಕೆ ಪ್ರತ್ಯಾಸ್ತ್ರ ಅನ್ನುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿತ್ತು.

ಚುನಾವಣಾ ಬಾಂಡ್ ಗಳನ್ನು ಖರೀದಿಸಲು ಉದ್ಯಮಿಗಳ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ಸಾಮಾಜಿಕ ಕಾರ್ಯಕರ್ತ ಆದರ್ಶ್ ಆರ್ ಅಯ್ಯರ್ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಪೊಲೀಸರು ದಾಖಲಿಸಿರುವ ಎಫ್ಐಆರ್ ಅನ್ನು ಪ್ರಶ್ನಿಸಿ ನಳೀನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅನುಮೋದಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್, ಜಾರಿ ನಿರ್ದೇಶನಾಲಯದ (ಇಡಿ) ,ಬಿಜೆಪಿ ಪದಾಧಿಕಾರಿಗಳು ಮತ್ತು ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಅನೇಕ ಕಾರ್ಪೊರೇಟ್ ಮತ್ತು ಉದ್ಯಮಿಗಳನ್ನು ಬಲವಂತವಾಗಿ ಹಲವಾರು ಕೋಟಿ ಮೌಲ್ಯದ ಚುನಾವಣಾ ಬಾಂಡ್ ಗಳನ್ನು ಖರೀದಿಸಲು ಪ್ರೇರೇಪಿಸಿ, ಅವುಗಳನ್ನು ಬಿಜೆಪಿ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ನಗದೀಕರಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.