ರಾಜ್ಯದಲ್ಲಿ 20 ಸಾವಿರ ಜನಸಂಖ್ಯೆ ಮೇಲ್ಪಟ್ಟ ಗ್ರಾಮ ಪಂಚಾಯತಿಗಳಿಗೆ ಮಾತ್ರ ಪಟ್ಟಣ ಪಂಚಾಯತಿ ಭಾಗ್ಯ.!

ರಾಜ್ಯ

ಸರಕಾರದ ಬಳಿ 50 ಕ್ಕೂ ಹೆಚ್ಚು ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆ ಮೇಲ್ದರ್ಜೆಗೆ ಪ್ರಸ್ತಾವನೆ ಇದೆ: ನಗರಾಭಿವೃದ್ಧಿ ಸಚಿವರು

ರಾಜ್ಯದ ವಿವಿಧ ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳನ್ನಾಗಿ, ಪಟ್ಟಣ ಪಂಚಾಯತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ 50 ಕ್ಕೂ ಹೆಚ್ಚು ಪ್ರಸ್ತಾವನೆಗಳು ರಾಜ್ಯ ಸರಕಾರದ ಮುಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಹಂತ ಹಂತವಾಗಿ ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಆದರೆ 2011 ರ ಜನಗಣತಿಯ ಆಧಾರ 20,000 ಕ್ಕೂ ಅಧಿಕ ಜನಸಂಖ್ಯೆ ಇದ್ದರೆ ಮಾತ್ರ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಬಹುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಪ್ರಶ್ನೆಗೆ ಉತ್ತರಿಸುತ್ತಾ ಈ ಹೇಳಿಕೆ ನೀಡಿದ್ದಾರೆ. ಪಟ್ಟಣ ಪಂಚಾಯಿತಿ ಯಾಗಿ ಮೇಲ್ದರ್ಜೆಗೆ ಪರಿವರ್ತನೆಯಾದ ಮೇಲೆ ಅಗತ್ಯ ಅಧಿಕಾರಿ, ಸಿಬ್ಬಂದಿ ಹಾಗೂ ಅನುದಾನಗಳನ್ನು ನೀಡಬೇಕಿದೆ ಎಂದು ಈ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆ.

ಒಟ್ಟಾರೆಯಾಗಿ ಸರಕಾರ ಸದ್ಯಕ್ಕಂತೂ ಯಾವುದೇ ಗ್ರಾಮ ಪಂಚಾಯತಿ ಗಳನ್ನು ಮೇಲ್ದರ್ಜೆಗೇರಿಸುವ ಸಾಧ್ಯತೆ ಕಡಿಮೆ ಎಂಬುದು ನಗರಾಭಿವೃದ್ಧಿ ಸಚಿವರ ಹೇಳಿಕೆಯಿಂದ ಅರ್ಥ ಮಾಡಿಕೊಳ್ಳಬಹುದಾಗಿದೆ.