ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ‌.ಪಿ.ನಡ್ಡಾ ಬದಲಿಗೆ ಹೊಸ ಅಧ್ಯಕ್ಷರ ಆಯ್ಕೆ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ

ರಾಷ್ಟ್ರೀಯ

ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಜೆ‌.ಪಿ.ನಡ್ಡಾ ಬದಲಿಗೆ ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. 2020 ರ ಫೆಬ್ರವರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅದ್ಯಕ್ಷರಾಗಿ ಆಯ್ಕೆಯಾದ ನಡ್ಡಾ ಪ್ರಸ್ತುತ ಕೇಂದ್ರ ಸಚಿವರೂ ಆಗಿದ್ದಾರೆ. ಅವರ ಅವಧಿ ಮುಗಿದಿದ್ದರೂ 2024ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ವಿಸ್ತರಿಸಲಾಗಿತ್ತು.

ಅಧ್ಯಕ್ಷರ ಆಯ್ಕೆಯನ್ನು ಚುನಾವಣೆ ಮೂಲಕ ನಡೆಸಲಾಗುತ್ತದೆಯೋ, ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಅವಿರೋಧವಾಗಿ ಆಯ್ಕೆ ಮಾಡಲಾಗುತ್ತದೋ ಎಂದು ಮುಂದಷ್ಟೇ ಗೊತ್ತಾಗಬೇಕು. ಇಲ್ಲಿಯವರೆಗೆ ಬಹುತೇಕ ಅವಿರೋಧ ಆಯ್ಕೆಯೇ ನಡೆದಿದೆ.

ಫೆಬ್ರವರಿ ಅಂತ್ಯದ ವೇಳೆಗೆ ಹೊಸ ಬಿಜೆಪಿ ಅಧ್ಯಕ್ಷರು ಅಧಿಕಾರ ವಹಿಸಿಕೊಳ್ಳುತ್ತಾರೆ ಅಂತ ಪಕ್ಷದ ಮೂಲಗಳು ತಿಳಿಸಿವೆ.