ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರವೀಣ್ ನೆಟ್ಟಾರ್ ಹತ್ಯಾ ಆರೋಪಿ ಮುಹಮ್ಮದ್ ಶರೀಫ್ ಅರೆಸ್ಟ್

ಕರಾವಳಿ

ಇಡೀ ರಾಜ್ಯಾದಾದ್ಯಂತ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರ್ ಹತ್ಯಾ ಪ್ರಕರಣದ ಆರೋಪಿಯಾದ ಮುಹಮ್ಮದ್ ಶರೀಫ್ ಎಂಬಾತನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗಿದೆ.

ಪ್ರವೀಣ್ ನೆಟ್ಟಾರ್ ಆರೋಪಿ ಯಾಗಿದ್ದ ಮುಹಮ್ಮದ್ ಶರೀಫ್ ಕೋಡಾಜೆ ನಿವಾಸಿಯಾಗಿದ್ದು, ನೆಟ್ಟಾರ್ ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕೆ ಎನ್ ಐಎ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಇದೀಗ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.