ಬಿಜೆಪಿ ಹಾಗೂ ಜೆಡಿಎಸ್ ನಲ್ಲಿ ರಾಜ್ಯಾಧ್ಯಕ್ಷ ಹುದ್ದೆಗೆ ತೀವ್ರ ಚರ್ಚೆ ನಡೀತಿದೆ. ಇನ್ನು ಈ ಎರಡೂ ಪಕ್ಷಗಳಲ್ಲಿ ರಾಜ್ಯಾದ್ಯಕ್ಷ ಸ್ಥಾನಕ್ಕೆ ಚಟುವಟಿಕೆ ನಡೀತಿರೋ ಬೆನ್ನಲ್ಲೇ , ಸದ್ಯ ಕಾಂಗ್ರೆಸ್ ನಲ್ಲೂ ಇಂಥದ್ದೇ ಚರ್ಚೆ ಶುರುವಾಗಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಅಂತ ಹೇಳುವ ಮೂಲಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂತದ್ದೊಂದು ಚರ್ಚೆ ಹುಟ್ಟುಹಾಕುವಂತೆ ಮಾಡಿದ್ದಾರೆ. ಒಬ್ಬರೇ ಎರಡೆರಡು ಹುದ್ದೆಯಲ್ಲಿದ್ದರೆ ತಮ್ಮ ಜವಾಬ್ದಾರಿ ನಿಭಾಯಿಸೋದು ಕಷ್ಟ. ಹೀಗಾಗಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಲೇಬೇಕು ಅನ್ನೋದು ಎಲ್ಲರ ಅಭಿಪ್ರಾಯ ಅಲ್ಲದೇ ಇದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇನ್ನು ಕೆಪಿಸಿಸಿಗೆ ಈಗಿರುವ ಅಧ್ಯಕ್ಷರನ್ನೇ ಮುಂದುವರಿಸಬೇಕಾ ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಅನ್ನೋದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು. ಇದು ನಮ್ಮ ಹಂತದಲ್ಲಿ ಆಗುವಂತಹದ್ದಲ್ಲ. ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಅಂದಿದ್ದಾರೆ.