ರಿವಾಲ್ವರ್ ಮಿಸ್ ಫೈರಿಂಗ್.. ಕಾಂಗ್ರೆಸ್ ಮುಖಂಡಗೆ ಗಾಯ. ಆಸ್ಪತ್ರೆಗೆ ದಾಖಲು..

ಕರಾವಳಿ

ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ ಅಚಾನಕ್ಕಾಗಿ ಸಿಡಿದು ಕಾಂಗ್ರೆಸ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿ ಗಾಯಗೊಂಡಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಾಜಿ ಇಂಟಕ್ ಮುಖಂಡ ಬೊಂಡಾಲ ಚಿತ್ತರಂಜನ್ ಶೆಟ್ಟಿಯವರು ಇತ್ತೀಚೆಗಷ್ಟೇ ತನ್ನ ಆತ್ಮರಕ್ಷಣೆಗಾಗಿ ಪರವಾನಗಿ ಪಡೆದು ರಿವಾಲ್ವರ್ ಇಟ್ಟುಕೊಂಡಿದ್ದರು.

ಇಂದು ವಿಟ್ಲ ಠಾಣಾ ವ್ಯಾಪ್ತಿಯ ಅನಂತಾಡಿ ಬಳಿ ತನ್ನದೇ ರಿವಾಲ್ವರ್ ನ ಗುಂಡು ಆಕಸ್ಮಿಕವಾಗಿ ಸಿಡಿದು ಕಾಲಿನ ಭಾಗಕ್ಕೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಅನಂತಾಡಿಗೆ ಯಾವ ಉದ್ದೇಶಕ್ಕಾಗಿ ಬಂದಿದ್ದಾರೆಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ. ಗಾಯಾಳು ಶೆಟ್ಟಿಯವರು ಮಂಗಳೂರು ಪಡೀಲ್ ಜನಪ್ರಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.