ಸೂರ್ಯಾಸ್ತಮಾನದ ಬಳಿಕವೂ ಮಹಿಳೆಯನ್ನು ಬಂಧಿಸಬಹುದು ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಸೂರ್ಯಾಸ್ತದ ಬಳಿಕ ಮಹಿಳೆಯರನ್ನು ಬಂಧಿಸುವಂತಿಲ್ಲ ಎಂದು ಹೇಳಿರುವುದು ನಿರ್ದೇಶನವೇ ಹೊರತು ಅದು ಕಡ್ಡಾಯವಲ್ಲ ಎಂದು ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಮತ್ತು ನ್ಯಾಯಮೂರ್ತಿ ಜೋತಿರಾಮನ್ ಅವರಿದ್ದ ಪೀಠ ಹೇಳಿದೆ.
ಅಸಾಧಾರಣ ಸಮಯದಲ್ಲಿ ಸೂರ್ಯಾಸ್ತದಿಂದ ಸೂರ್ಯೋದಯದವರೆಗೆ ಮಹಿಳೆಯರನ್ನು ಬಂಧಿಸುವುದನ್ನು ನಿರ್ಬಂಧಿಸಲಾಗಿದೆ. ಆದರೂ ಇಂತಹ ಸಂದರ್ಭಗಳಲ್ಲಿ ಮ್ಯಾಜಿಸ್ಟ್ರೇಟ್ ಅನುಮತಿ ಪಡೆದುಕೊಂಡು ಬಂಧಿಸಬಹುದು ಎಂದು ಕೋರ್ಟ್ ಹೇಳಿದೆ.
ಮಹಿಳೆಯೊಬ್ಬರ ಬಂಧನಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿ ಪೊಲೀಸರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ.
