ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಕಬೈಲ್ ಗಾಣೆಮಾರ್ ಎಂಬಲ್ಲಿ ಫೆಬ್ರವರಿ 14 ರ ಮಧ್ಯರಾತ್ರಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಚರಂಡಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಘಟನೆಯಲ್ಲಿ ರಿಕ್ಷಾ ಚಾಲಕ ಅಮ್ಮುಂಜೆ ನಿವಾಸಿ ಮಹಾಬಲ ಪೂಜಾರಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ರಿಕ್ಷಾದಲ್ಲಿದ್ದ ಮೂವರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.

ಎಡಪದವು ಮಿಜಾರಿನಲ್ಲಿ ನಡೆಯುತ್ತಿರುವ ಜಾತ್ರೆಗೆ ಸಂಬಂಧಿಕ ಮೂವರು ಮಕ್ಕಳೊಂದಿಗೆ ತೆರಳಿದ್ದ ಮಹಾಬಲ ಪೂಜಾರಿ ಜಾತ್ರೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ.
ಚಾಲಕನ ಅಜಾಗರೂಕತೆ ಘಟನೆಗೆ ಕಾರಣ ಎನ್ನಲಾಗಿದ್ದು, ಪಾಣೆಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
