ಮಲೆನಾಡಿನಲ್ಲಿ ಕೆ ಎಫ್ ಡಿ ಕಾಟ.! 54 ವರ್ಷ ಪ್ರಾಯದ ಮಹಿಳೆಯೊಬ್ಬರು ಕೆಎಫ್ ಡಿ ಸೋಂಕಿಗೆ ಬಲಿ.

ರಾಜ್ಯ

ಮಲೆನಾಡಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷದ ಮೊದಲ ಬಲಿಯಾಗಿದೆ. 54 ವರ್ಷ ಪ್ರಾಯದ ಮಹಿಳೆಯೊಬ್ಬರು ಕೆಎಫ್ ಡಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಶಿವಮೊಗ್ಗದ ತೀರ್ಥಹಳ್ಳಿ ತಾಲೂಕನ ಕೊನೇರಿಪುರ ಗ್ರಾಮದ ಮಹಿಳೆ ಹಲವು ಸಮಯದಿಂದ ಮಂಗನ ಕಾಯಿಲೆಯ ಸೋಂಕಿಂದ ಬಳಲುತ್ತಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಜನವರಿ ತಿಂಗಳ 23 ರಂದು ಈ ಮಹಿಳೆಗೆ ಕೆಎಫ್‌ಡಿ ಪಾಸಿಟಿವ್‌ ಬಂದಿತ್ತು. ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿ ಸುಧಾರಣೆ ಕಾಣದ ಕಾರಣ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಜ.29ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಮತ್ತೆ ಕೆಎಫ್‌ಡಿ ರೋಗದ ಲಕ್ಷಣ ಕಂಡುಬಂದ ಹಿನ್ನೆಲೆ ಫೆ.5ರಂದು ಪುನಃ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಪಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.