ವಂಶವೃಕ್ಷ ಪಡೆಯಲು ಒಂದೊಂದು ಜಿಲ್ಲೆಯಲ್ಲಿ ಬೇರೆ ಬೇರೆ ದಾಖಲೆಗಳನ್ನು ಕೇಳುತ್ತಿದ್ದಾರೆ ಎಂದು ಮೇಲ್ಮನೆ ಸದಸ್ಯ ವೈ.ಎಂ. ಸತೀಶ್ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರತಿಕ್ರಿಯಯಿಸಿ, ವಂಶವೃಕ್ಷ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ವಂಶವೃಕ್ಷ ಪಡೆಯಲು ಒಂದೇ ಮಾದರಿಯ ಮಾನದಂಡ ಅನುಸರಿಸಲಾಗುತ್ತಿದೆ. ಅದರಂತೆ ಪಡಿತರ ಚೀಟಿ ಅಥವಾ ಮತದಾರರ ಚೀಟಿ ಅಥವಾ ಆಧಾರ್ ಕಾರ್ಡ್ ನೀಡಬೇಕು. ಅರ್ಜಿ ನಮೂನೆಯಲ್ಲಿ ಸ್ವಯಂಘೋಷಿತ ಪತ್ರ ನೀಡಬೇಕು. ಈ ದಾಖಲೆಗಳೊಂದಿಗೆ ಗ್ರಾಮ ಲೆಕ್ಕಿಗರು ಕ್ಷೇತ್ರ ಪರಿಶೀಲನೆ ಮಾಡಿದ ವರದಿಯ ಆಧಾರದ ಮೇಲೆ ಪ್ರಮಾಣ ಪತ್ರ ವಿತರಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
