ವಕ್ಪ್ ಮಸೂದೆ 2024, ಜನರ ಆಕಾಂಕ್ಷೆಗಳಿಗೆ ವಿರುದ್ಧವಾಗಿದೆ. ಸರ್ವಾನುಮತದಿಂದ ತಿರಸ್ಕರಿಸಿ, ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ ಒತ್ತಾಯ

ರಾಜ್ಯ

ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಕರ್ನಾಟಕ ವಿಧಾನಸಭೆ ಬುಧವಾರ ನಿರ್ಣಯವನ್ನು ಅಂಗೀಕರಿಸಿದೆ. ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿದೆ ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಿದೆ ಎಂದು ಎಚ್.ಕೆ.ಪಾಟೀಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ. ವಕ್ಫ್ ಕಾಯ್ದೆಯ ತಿದ್ದುಪಡಿಯನ್ನು ಈ ಸದನವು ಸರ್ವಾನುಮತದಿಂದ ತಿರಸ್ಕರಿಸುತ್ತದೆ. ಏಕೆಂದರೆ ಇದು ಕರ್ನಾಟಕದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಹಿಂತೆಗೆದುಕೊಳ್ಳುವ ಮೂಲಕ ದೇಶದ ಸರ್ವಾನುಮತದ ಅಭಿಪ್ರಾಯಗಳನ್ನು ಗೌರವಿಸಲು ವಿಳಂಬವಿಲ್ಲದೆ ಕ್ರಮ ಕೈಗೊಳ್ಳುವಂತೆ ಈ ಸದನವು ಕೇಂದ್ರ ಸರ್ಕಾರವನ್ನು ಸರ್ವಾನುಮತದಿಂದ ವಿನಂತಿಸುತ್ತದೆ ಎಂದು ಹೆಚ್.ಕೆ ಪಾಟೀಲ್ ಅವರು ಹೇಳಿದರು.