ಮಂಗಳೂರ ನಗರದಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಎಂಬವರ ಮನೆ, ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದ ತಂಡದಿಂದ ದಾಳಿ ನಡೆದಿದೆ.
ಒಟ್ಟು 3-4 ವಾಹನಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ತುಮಕೂರು ಮೂಲದವರು.
