ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಲಂಚವತಾರ; ಅಮೇಧ್ಯ ಪಡೆಯುವಾಗ ಲೋಕಾಯುಕ್ತ ಬಲೆಗೆ ಅಧಿಕಾರಿಗಳು

ರಾಜ್ಯ

ಲಂಚಕ್ಕೆ ಬೇಡಿಕೆ ಇಟ್ಟು ಲಂಚದ ಹಣ ಪಡೆಯುತ್ತಿದ್ದಂತೆಯೇ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಕೃಷ್ಣವೇಣಿ ಜೊತೆಗೆ ಇಬ್ಬರು ಸಿಬ್ಬಂದಿಗಳು ಕೂಡ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.

ಗಣೇಶ ಎಂಬ ವ್ಯಕ್ತಿಯಿಂದ 50 ಸಾವಿರ ರೂಪಾಯಿ ಲಂಚದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ದೂರುದಾರರು ಇರಾ ಗ್ರಾಮದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ನೆಲಸಮಗೊಳಿಸಲು ಕಟ್ಟಡಕಲ್ಲು ತೆಗೆಯಲು ಅನುಮತಿ ಕೇಳಿದರಂತೆ, ಈ ವೇಳೆ ಅಧಿಕಾರಿಯು ವ್ಯಕ್ತಿಗೆ 50,000ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇಂದು ಲಂಚದ ಹಣ ಪಡೆಯುತ್ತಿದ್ದ ವೇಳೆಯಲ್ಲೇ ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ, ಸಿಬ್ಬಂದಿ ಮತ್ತು ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ವ್ಯವಸ್ತಿತವಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕಿ ಕೃಷ್ಣವೇಣಿಯನ್ನು ಖೆಡ್ಡಕ್ಕೆ ಹಣಿಯಲು ತಂತ್ರ ರೂಪಿಸಿ ಎಲ್ಲವನ್ನು ಸುಸ್ರೂತ್ರವಾಗಿ ನಡೆಸಿದ ಅದೇ ಇಲಾಖೆಯ ಅಧಿಕಾರಿಯೊಬ್ಬನ ಕುತಂತ್ರಕ್ಕೆ ಬಲಿಯಾದರು ಎಂಬ ಗುಮಾನಿಯು ಇದೀಗ ಕೇಳಿಬರುತ್ತಿದೆ. ಈತ ಈ ಮೊದಲು ಲೋಕಾಯುಕ್ತ ಬಲೆಗೆ ಬಿದ್ದು ಕಂಬಿ ಎಣಿಸಿದ್ದ. ಈತನ ಕುತಂತ್ರದಿಂದ ಕೃಷ್ಣವೇಣಿ ಬಲಿಪಶು ಆಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈತ ಹನಿಟ್ರಾಪ್ ತಂಡದೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾನಂತೆ.

ಲೋಕಾಯುಕ್ತ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಪ್ರಭಾರ ಎಸ್‌ಪಿ ಕುಮಾರಚಂದ್ರ, ಡಿವೈಎಸ್‌ಪಿ ಡಾ. ಗಾನ ಪಿ ಕುಮಾರ್‌, ಸುರೇಶ್‌ ಕುಮಾರ್‌.ಪಿ, ಪೊಲೀಸ್‌ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್‌ ಕೆ.ಎನ್‌ ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್‌ ಠಾಣೆ ಪೊಲೀಸ್‌ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯ್ಕ ಮತ್ತಿತರರು ಭಾಗವಹಿಸಿದ್ದರು