ಮಹಿಳೆಯ ಗಂಡ ಹಾಗೂ ಕಾವೂರು ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಬಂಧನ
ದಿನಾಂಕ: 15-07-2025 ರಂದು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಸಂತ್ರಸ್ತ ಮಹಿಳೆಯೊರ್ವರು ಠಾಣೆಗೆ ಹಾಜರಾಗಿ ಲಿಖಿತ ದೂರನ್ನು ನೀಡಿದ್ದು, ತನ್ನ ಗಂಡನು ಹಣಕ್ಕಾಗಿ ಒತ್ತಾಯಪೂರ್ವಕವಾಗಿ ಬೇರೊಬ್ಬ ಪುರುಷನೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಮಾಡಿ, ಅದರ ವಿಡಿಯೋವನ್ನು ಚಿತ್ರೀಕರಣ ಮಾಡಿ, ಇತರರೊಂದಿಗೆ ದೈಹಿಕ ಸಂಪರ್ಕ ನಡೆಸುವಂತೆ ಇಲ್ಲವಾದಲ್ಲಿ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿಯ ಬಿಡುವುದಾಗಿ ಬೆದರಿಸಿರುವುದಾಗಿ ದೂರು ನೀಡಿರುತಾರೆ.

ಸಂತ್ರಸ್ತ ಮಹಿಳೆಯು ತನಗೆ ಪರಿಚಯವಿರುವ ಕಾವೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಂದ್ರನಾಯ್ಕ್ ನಿಗೆ ಈ ಬಗ್ಗೆ ತಿಳಿಸಿದಾಗ, ಚಂದ್ರನಾಯ್ಕ್ ಸಂತ್ರಸ್ಥೆಯ ಮನೆಗೆ ಹೋಗಿ ಗಂಡನ ಮೊಬೈಲ್‌ನಲ್ಲಿದ್ದ ಪೋಟೋ ಮತ್ತು ವಿಡಿಯೋವನ್ನು ಅಳಿಸಿರುತ್ತಾನೆ. ನಂತರ ಸಂತ್ರಸ್ತೆಯ ಗಂಡನ ದುಷ್ಪ್ರೇರಣೆಯಂತೆ ಚಂದ್ರನಾಯ್ಕ್ ಸಂತ್ರಸ್ಥ ಮಹಿಳೆಯೊಂದಿಗೆ ಒತ್ತಾಯ ಪೂರ್ವಕವಾಗಿ ಅವಳ ಇಚ್ಚೆಯ ವಿರುದ್ದ ದೈಹಿಕ ಸಂಪರ್ಕ ನಡೆಸಿರುತ್ತಾನೆ.
ಸಂತ್ರಸ್ತೆಯ ದೂರಿನ ಹಿನ್ನಲೆಯಲ್ಲಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಮಹಿಳೆಯ ಗಂಡ ಮತ್ತು ಕಾವೂರು ಠಾಣಾ ಪೊಲೀಸ್ ಕಾನ್ಸ್ಟೇಬಲ್ ಚಂದ್ರನಾಯ್ಕ್ ನನ್ನು ದಸ್ತಗಿರಿ ಮಾಡಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.
