ಧರ್ಮಸ್ಥಳ ಫೈಲ್ಸ್ ಮೇಜರ್ ಟ್ವಿಸ್ಟ್; ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಹೊಸ ಯು‌.ಡಿ.ಆರ್ ಪ್ರಕರಣ ಎಸ್.ಐ.ಟಿ ಹೆಗಲಿಗೆ

ಕರಾವಳಿ

ದೇಶದಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳ ಫೈಲ್ಸ್ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ರಾಜ್ಯ ಸರಕಾರ ಪ್ರಕರಣವನ್ನು ಎಸ್ ಐಟಿ ತಂಡಕ್ಕೆ ವರ್ಗಾಯಿಸಿತ್ತು. ಅನಾಮಿಕ ತೋರಿಸಿದ 13 ಸ್ಥಳಗಳಲ್ಲಿ ಉತ್ಖನನ ಕಾರ್ಯ ನಡೆಯುತ್ತಿರುವ ಹೊತ್ತಿನಲ್ಲಿ ಮತ್ತೆರಡು ಹೊಸ ಪ್ರಕರಣಗಳನ್ನು ಎಸ್ ಐಟಿ ಹೆಗಲಿಗೆ ವಹಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ: 39/2025 ಕಲಂ:211 (ಎ) BNS ಪ್ರಕರಣವನ್ನು ಜುಲೈ 19 ರಂದು ರಾಜ್ಯ ಸರಕಾರ ವಿಶೇಷ ತನಿಖಾ ತಂಡ (SIT) ಕ್ಕೆ ವರ್ಗಾಯಿಸಲಾಗಿತ್ತು. ಜುಲೈ 31 ರಂದು ಆರನೇ ಪಾಯಿಂಟ್ ನಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು. ಅಗಸ್ಟ್ 4 ರಂದು ಅಪ್ರಾಪ್ತ ಬಾಲಕಿಯನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವ ಬಗ್ಗೆ ಜಯಂತ್ ಎಂಬವರ ದೂರರ್ಜಿಯ ಪ್ರಕರಣವನ್ನು ಎಸ್ ಐಟಿ ಗೆ ಹೊಸದಾಗಿ ವರ್ಗಾಯಿಸಲಾಗಿದೆ.

ಜುಲೈ 31 ರಂದು ಎಸ್‌.ಐ.ಟಿ ತಂಡ ಉತ್ಖನನ ಮಾಡುತ್ತಿದ್ದಾಗ ಸ್ಥಳದಲ್ಲಿ ದೊರೆತ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ಯು.ಡಿ.ಆರ್ ಸಂಖ್ಯೆ:35/2025 ಪ್ರಕರಣ ದಾಖಲಾಗಿತ್ತು. ಈಗಾಗಲೇ ಉತ್ಖನನಕ್ಕಾಗಿ ನಿಗಧಿಪಡಿಸಲಾಗಿರುವ ಸ್ಥಳಗಳ ಹೊರತಾಗಿ, ಅಗಸ್ಟ್ 4 ರಂದು ಬೇರೆ ಜಾಗದಲ್ಲಿ, ಮಣ್ಣಿನ ಮೇಲೆ ಕಂಡುಬಂದ ಅಸ್ಥಿಪಂಜರದ ಅವಶೇಷಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ದಿನಾಂಕ:05.08.25 ರಂದು ಯು.ಡಿ.ಆರ್ ಸಂಖ್ಯೆ:36/2025 ಪ್ರಕರಣ ಹಾಗೂ ಜಯಂತ್ ಎಂಬವರು ನೀಡಿದ ದೂರಿಗೆ ಸಂಬಂಧಿಸಿದಂತೆ, ದಿನಾಂಕ: 04.08.2025 ರಂದು ಧರ್ಮಸ್ಥಳ ಠಾಣೆಯಲ್ಲಿ 200/DPS/2025 ರಂತೆ ದಾಖಲಾಗಿರುವ ದೂರರ್ಜಿ ಪ್ರಕರಣವನ್ನು ಕರ್ನಾಟಕ ರಾಜ್ಯದ ಡಿಜಿ ಮತ್ತು ಐಜಿಪಿರವರ ಅನುಮೋದನೆ ಪಡೆದು ವಿಶೇಷ ತನಿಖಾ ತಂಡ (SIT)ಕ್ಕೆ ವರ್ಗಾಯಿಸಿ ಆದೇಶಿಸಿದ್ದಾರೆ.