ಯಾವ್ಯಾವ ಗ್ರಾಮಗಳು ಯಾವ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಲಿದೆ; ಇಲ್ಲಿದೆ ಪುಲ್ ಡೀಟೇಲ್ಸ್
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರ್ ಮತ್ತು ಅರ್ಕುಳ ಗ್ರಾಮಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಪದವು ಗ್ರಾಮವನ್ನು ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಮರುವಿಂಗಡಿಸಿ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ.
ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಪದವು ಗ್ರಾಮಕ್ಕೆ ಒಳಪಡುವ ಕುಲಶೇಖರ, ಸಿಲ್ವರ್ ಗೇಟ್, ಡೈರಿ ಗೇಟ್, ಕುಲಶೇಖರ ಚೌಕಿ, ಪದವಿನಂಗಡಿ, ಗುರುನಗರ, ಮೇರಿಹಿಲ್ ವೆಂಕಟರಮಣ ದೇವಸ್ಥಾನ ರಸ್ತೆ, ಕೊಪ್ಪಲಕಾಡು, ಬಾಂದೋಟ್ಟು, ಯೆಯ್ಯಾಡಿ, ದಂಡಕೇರಿ, ಶಕ್ತಿನಗರ, ನೀತಿನಗರ, ಪೊಲೀಸ್ ಲೇನ್, ಸಂಜಯನಗರ, ಮುಗ್ರೋಡಿ, ಕಾರ್ಮಿಕ ಕಾಲೋನಿ, ಕೆಹೆಚ್ ಬಿ, ನಾಲ್ಯಪದವು, ಗಂಧಕಾಡು, ಯೆಯ್ಯಾಡಿ ಇಂಡಸ್ಟ್ರಿಯಲ್ ಏರಿಯ, ರಾಜೀವ ನಗರ, ಮುತ್ತಪ್ಪ ಗುಡಿ, ಕಕ್ಕೆಬೆಟ್ಟು, ಮಂಜಡ್ಕ, ದತ್ತನಗರ, ಸಿರ್ಲ ಪಡ್ಪು ಪ್ರದೇಶಗಳನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರ್ ಮತ್ತು ಅರ್ಕುಳ ಗ್ರಾಮಕ್ಕೆ ಒಳಪಡುವ ಸ್ಥಳಗಳಾದ ಅಡ್ಯಾರ್ ಪದವು, ವಳಚ್ಚಿಲ್, ಸೋಮನಾಥ ಕಟ್ಟೆ, ಅಡ್ಯಾರ್ ಕಟ್ಟೆ, ಅರ್ಕುಳ, ಶ್ರೀನಿವಾಸ ಕಾಲೇಜು, ಸಹ್ಯಾದ್ರಿ ಕಾಲೇಜು ಪ್ರದೇಶಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಮರು ವಿಂಗಡಿಸಲಾಗಿದೆ.

ಅಗಸ್ಟ್ 15 ರಿಂದ ಪದವು ಗ್ರಾಮಕ್ಕೆ ಒಳಪಡುವ ಸಾರ್ವಜನಿಕರು ತಮ್ಮ ಕ್ರಿಮಿನಲ್ ಪ್ರಕರಣಗಳು, ದೂರು ಅರ್ಜಿಗಳು, ಪಾಸ್ ಪೋರ್ಟ್ ಅರ್ಜಿ ವಿಚಾರಣೆ, ಪಿಸಿಸಿ ವಿಚಾರಣೆ ಹಾಗೂ ಪೊಲೀಸ್ ಇಲಾಖೆಗೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಹಾಗೂ ಅಡ್ಯಾರ್ ಮತ್ತು ಅರ್ಕುಳ ಗ್ರಾಮಕ್ಕೆ ಒಳಪಡುವ ಸಾರ್ವಜನಿಕರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

