ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಎರಡೂ ಸಂವಿಧಾನಿಕ ನ್ಯಾಲಯಗಳು. ಎರಡರ ಪೈಕಿ ಶ್ರೇಷ್ಠ ಅಥವಾ ಕೀಳು ಎಂಬುದಿಲ್ಲ: ಸಿಜೆಐ ಗವಾಯಿ
ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕೊಲಿಜಿಯಂ ಎರಡೂ ಸಾಂವಿಧಾನಿಕ ಸಂಸ್ಥೆಗಳು. ಇವುಗಳಲ್ಲಿ ಯಾವುದೂ ಮೇಲಲ್ಲ, ಯಾವುದೂ ಕೀಳಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು
ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಯೋಜಿಸಿದ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಅಭಿಪ್ರಾಯಪಟ್ಟರು ಈ ಸಂದರ್ಭದಲ್ಲಿ SCBA ಇದರ ಅಧ್ಯಕ್ಷ ವಿಕಾಸ್ ಸಿಂಗ್ ಅವರು, ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಕೀಲಿಕೆ ಮಾಡುವ ವಕೀಲರನ್ನೂ ಪರಿಗಣಿಸಿ ಎಂದು ಮನವಿ ಮಾಡಿದರು.
ನ್ಯಾಯಮೂರ್ತಿಗಳ ನೇಮಕಕ್ಕೆ ನಿರ್ದಿಷ್ಟ ಹೆಸರು ಶಿಫಾರಸು ಮಾಡುವಂತೆ ಹೈಕೋರ್ಟ್ ಕೊಲಿಜಿಯಂಗೆ, ಸುಪ್ರೀಂ ಕೋರ್ಟ್ ಕೊಲಿಜಿಯಂ ಆದೇಶ ಮಾಡುವಂತಿಲ್ಲ’ ಎಂದು ಗವಾಯಿ ಸ್ಪಷ್ಟಪಡಿಸಿದರು. ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಹೈಕೋರ್ಟ್ ಕೊಲಿಜಿಯಂ ಮೊದಲಿಗೆ ನಿರ್ಧಾರ ಕೈಗೊಳ್ಳುತ್ತದೆ. ಹೈಕೋರ್ಟ್ ಕೊಲಿಜಿಯಂಗೆ ನಾವು ಕೆಲವು ಹೆಸರುಗಳನ್ನು ಶಿಫಾರಸು ಮಾಡುತ್ತೇವೆ ಮತ್ತು ಅವುಗಳನ್ನು ಪರಿಗಣಿಸುವಂತೆ ಮನವಿ ಮಾಡುತ್ತೇವೆ. ಅಂತಿಮವಾಗಿ ಹೈಕೋರ್ಟ್ ಕೊಲಿಜಿಯಂ ಅರ್ಹ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಸುಪ್ರೀಂ ಕೋರ್ಟ್‌ಗೆ ಕಳುಹಿಸುತ್ತದೆ ಎಂದು ಅವರು ವಿವರಿಸಿದರು.
ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿದ್ದಾಗ, ಅಭ್ಯರ್ಥಿಗಳೊಂದಿಗೆ ಸಂದರ್ಶನ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಲಾಯಿತು. ಅಭ್ಯರ್ಥಿಗಳೊಂದಿಗೆ 10 ನಿಮಿಷ, 15 ನಿಮಿಷ ಅಥವಾ ಅರ್ಧ ತಾಸು ಸಂವಾದ ನಡೆಸಿದಾಗ ಸಮಾಜದ ಸೇವೆ ಸಲ್ಲಿಸಲು ಅವರು ಯೋಗ್ಯರೇ ಎಂಬುದನ್ನು ಪರಿಶೀಲಿಸಬಹುದು ಎಂದು ಅವರು ಹೇಳಿದರು. ಸ್ವಾತಂತ್ರ್ಯೋತ್ಸವನ್ನು ಉಲ್ಲೇಖಿಸಿ, ಸ್ವಾತಂತ್ರ್ಯವು ರಾಜಕೀಯ ಚಳವಳಿ ಅಷ್ಟೇ ಅಲ್ಲ, ನೈತಿಕ ಮತ್ತು ಕಾನೂನಾತ್ಮಕ ಹೋರಾಟವೂ ಆಗಿತ್ತು. ಅಸಂಖ್ಯಾತ ವಕೀಲರು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ದೇಶದ ಇತಿಹಾಸವು ತಿಳಿಸಿಕೊಡುತ್ತದೆ ಎಂದು ಅವರು ಹೇಳಿದರು.
