ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಪ್ರಕರಣ: ಆರೋಪಿ ದಯಾನಂದ ನಾಯ್ಕನ ಬಂಧನ, ಸೊತ್ತುಗಳ ವಶ

ಕರಾವಳಿ

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ, ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000 ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಪ್ರಕರಣದ ಆರೋಪಿಯಾದ ಪುತ್ತೂರು, ನೆಟ್ಟಣಿಗೆ ಮುಡೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29)ಎಂಬಾತನನ್ನು ಈಶ್ವರಮಂಗಲ ಎಂಬಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ದಯಾನಂದ ನಾಯ್ಕ್ ಕಳವುಗೈದ 30.120 ಗ್ರಾಂ ಚಿನ್ನ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ನ್ನು ಆರೋಪಿಯಿಂದ ಪೊಲೀಸರು ವಶಪಡಿಸಿಕೊಂಡಿರುತ್ತಾರೆ.

ಈ ಕಳವು ಪ್ರಕರಣದ ಆರೋಪಿಯ ಪತ್ತೆ ಕಾರ್ಯಚರಣೆಯಲ್ಲಿ ಪುತ್ತೂರು ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಅರುಣ್ ನಾಗೇಗೌಡ ಹಾಗೂ ಪೊಲೀಸ್ ನಿರೀಕ್ಷಕರಾದ ರವಿ ಬಿ.ಎಸ್ ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್ ರವರ ನೇತೃತ್ವದ, ಎಎಸ್‌ಐ ಚಂದ್ರಶೇಖರ್, ಸಿಬ್ಬಂದಿಗಳಾದ ಪ್ರವೀಣ್, ಮಧು, ಹರೀಶ್, ಸುಬ್ರಹ್ಮಣ್ಯ, ಆಕಾಶ್, ಯುವರಾಜ್, ಶರಣಪ್ಪ ಪಾಟೀಲ್, ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್‌ರವರನ್ನೊಳಗೊಂಡ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.