ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಕಪೋಕಲ್ಪಿತ ಅದು ಸತ್ಯಕ್ಕೆ ದೂರವಾದ ವಿಷಯ: ಸಂಸದ ಸಶಿಕಾಂತ್ ಸೆಂಥಿಲ್

ರಾಜ್ಯ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ಅನಾಮಿಕನಿಗೆ ಬುರುಡೆ ಕೊಟ್ಟಿದ್ದು ನಾನು ಎಂಬ ಶಾಸಕ ಜನಾರ್ಧನ ರೆಡ್ಡಿಯ ಹೇಳಿಕೆಯನ್ನು ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್‌ ಸೆಂಥಿಲ್‌ ತಳ್ಳಿ ಹಾಕಿದ್ದಾರೆ. ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಕಪೋಕಲ್ಪಿತ ಅದು ಸತ್ಯಕ್ಕೆ ದೂರವಾದ ವಿಷಯ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧ ಪ್ರಕರಣಗಳನ್ನು, ಅಕ್ರಮಗಳನ್ನು ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಕೆಲಸದ ಭಾಗವಾಗಿ ನಾನು ಇದನ್ನು ನಾನು ಮಾಡಿದ್ದೇನೆ. ಬಹುಶಃ ಆ ಕಾರಣಗಳಿಂದ ಅವರು ನನ್ನ ಮೇಲೆ ಇಂತಹ ಆರೋಪ ಮಾಡಿರಬಹುದು ಎಂದಿದ್ದಾರೆ.

ಇದನ್ನು ಹೊರತುಪಡಿಸಿ ಇದು ಬಿಜೆಪಿಯ ಹತಾಶ ರಾಜಕೀಯವಾಗಿರಬಹುದು ಎಂದು ತಿರುಗೇಟು ನೀಡಿದ್ದಾರೆ. ಇತ್ತಿಚೇಗೆ ಕರ್ನಾಟಕದಲ್ಲಿ ಹೊರ ಬಂದ ವೋಟ್‌ ಚೋರಿ ಪ್ರಕರಣದ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನಕ್ಕಾಗಿ ರೆಡ್ಡಿ ಆರೋಪ ಮಾಡಿರಬಹುದು. ವದಂತಿಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು. ಮಾಜಿ ಐಎಎಸ್ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್‌ ಸೆಂಥಿಲ್‌ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು.