ವಾಹನ ಸವಾರರಿಗೆ ಶುಭ ಸುದ್ದಿ. ಸಂಚಾರ ನಿಯಮ ಉಲ್ಲಂಘನೆಗೆ ದಂಡಕಟ್ಟಲು ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.

ಈ ರಿಯಾಯಿತಿಯು 23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.ಈ ಆದೇಶವನ್ನು ಆರ್ಥಿಕ ಇಲಾಖೆಯು ಅನಧಿಕೃತ ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 ದಿನಾಂಕ: 02.08.2025 ಮತ್ತು ದಿನಾಂಕ:16.08.2025 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ.
