ಖೋಟಾನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಕರಾವಳಿ

ನಿಜಾಮುದ್ದೀನ್ ಅಲಿಯಾಸ್ ನಿಜಾಮ್ ಜೋಡು ಮಾರ್ಗ, ಬಿ.ಸಿ ರೋಡ್, ಬಂಟ್ವಾಳ ಎಂಬಾತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಾನ್ಯ ನ್ಯಾಯಲಯದಲ್ಲಿ ವಿಚಾರಣೆಯಲ್ಲಿದ್ದು, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದು ನಂತರ ಪ್ರಕರಣಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಮೇಲೆ ಎಂಟು ಬಾರಿ ಬಂಧನ ವಾರಂಟ್ ಹೊರಡಿಸಿರುತ್ತದೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು 25-08-2025 ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಆಪಾದಿತನ ವಿರುದ್ಧ ಕಲಂ: 269 BNS-2023 ಪ್ರಕಾರ ಕ್ರಮ ಕೈಗೊಂಡು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಈತನ ಮೇಲೆ ದಾಖಲಾದ ಹಲವು ಪ್ರಕರಣಗಳು: ಮಂಗಳೂರು ಪೂರ್ವ ಪೊಲೀಸ್ ಠಾಣೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ. ಮಡಿವಾಳ ಪೊಲೀಸ್ ಠಾಣೆ. ಕುಶಾಲ ನಗರ ಗ್ರಾಮಾಂತರ ಪೊಲೀಸ್ ಠಾಣೆ. ಮಂ. ಬರ್ಕೆ ಪೊಲೀಸ್ ಠಾಣೆ. ಪುತ್ತೂರು ನಗರ ಪೊಲೀಸ್ ಠಾಣೆ. ವಿಟ್ಲ ಪೊಲೀಸ್ ಠಾಣೆ ಹೀಗೆ ಹಲವಾರು ಪ್ರಕರಣಗಳು ದಾಖಲಾಗಿ ವಿಚಾರಣಾ ಹಂತದಲ್ಲಿರುತ್ತದೆ.