ಅಕ್ರಮ ಮದ್ಯ ತಯಾರಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು ಬಂಧಿತರನ್ನು ಕಾಸರಗೋಡು ನಿವಾಸಿ ಪ್ರಣವ್ ವಿ ಶೆಣೈ (24) ಮತ್ತು ತಾಳಿಪಡ್ಪು ನಿವಾಸಿ ಅನೂಷ್ ಆರ್ (24) ಎಂದು ತಿಳಿದುಬಂದಿದೆ.

ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಕಂಬಳಪದವು ಪ್ರದೇಶದಲ್ಲಿನ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ಮದ್ಯ ತಯಾರಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಗಳನ್ನು ಪೊಲೀಸರು ಮನೆಗೆ ಕರೆದುಕೊಂಡು ಹೋಗಿ ಮಹಜರು ನಡೆಸಿದ್ದು, ಪೊಲೀಸರು ಮನೆಯನ್ನು ಪರಿಶೀಲನೆ ನಡೆಸಿದಾಗ ಸುಮಾರು 1,15,110/- ಮೌಲ್ಯ ದ ಅಕ್ರಮ ಮದ್ಯ ತಯಾರಿಕೆ ಯ ಮೂರು ಯಂತ್ರೋಪಕರಣಗಳು , ಅಕ್ರಮ ಮದ್ಯದ ಬಾಟ್ಲಿಗಳು ಮತ್ತು, ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟ ಮಾಡುವ ಪರವಾನಿಗೆ ಇರುವ ಮದ್ಯದ ಬಾಟ್ಲಿಗಳು , ಮದ್ಯ ತಯಾರಿಕೆಗೆ ಬೇಕಾದ ಇತರ ಸೊತ್ತುಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
