ಬೆಳ್ತಂಗಡಿ: ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕರಾವಳಿ

ನೆರಿಯಾ ಪೆಟ್ರೋನೆಟ್‌ ಪೈಪ್‌ ಲೈನ್‌ ನಿಂದ 2010 ರಲ್ಲಿ ಪೆಟ್ರೋಲ್‌ ಕಳ್ಳತನಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಮಾನ್ಯ ನ್ಯಾಯಾಲಯಕ್ಕೂ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿ ತಮ್ಮಯ್ಯ ಚಿಬಿದ್ರೆ ಎಂಬವರನ್ನು ಸೆ. 28 ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು, ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿ, ಬೆಳ್ತಂಗಡಿ ಪೊಲೀಸರು ಆರೋಪಿ ತಮ್ಮಯ್ಯ ಚಿಬಿದ್ರೆಯನ್ನು ತಮ್ಮ ವಶಕ್ಕೆ ಪಡೆದು, ಸೆ.29 ರಂದು ಸುಳ್ಯ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.