ರಾಜ್ಯಾದ್ಯಂತ ನ್ಯಾಯಕ್ಕಾಗಿ Oct 9 ಜನಾಗ್ರಹ ದಿನವನ್ನಾಗಿ ಆಚರಿಸಲು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕರೆ

ಕರಾವಳಿ

ಧರ್ಮಸ್ಥಳ ದೌರ್ಜನ್ಯಗಳು – ಇತಿಹಾಸ ಮತ್ತು ವರ್ತಮಾನ” ಎಂಬ ಪುಸ್ತಕ ಬಿಡುಗಡೆ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಅಕ್ಟೋಬರ್ 9 ರಂದು 13 ವರ್ಷಗಳು ತುಂಬುತ್ತಿದ್ದು, ಆ ದಿನವನ್ನು ರಾಜ್ಯಾದ್ಯಂತ ನ್ಯಾಯಕ್ಕಾಗಿ ಜನಾಗ್ರಹ ದಿನವನ್ನಾಗಿ ಆಚರಿಸಲು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಕರೆ ನೀಡಿದೆ.

ಅಕ್ಟೋಬರ್ 9 ರಂದು ರಾಜ್ಯದಾದ್ಯಂತ ತಾಲೂಕು, ಜಿಲ್ಲಾ ಮಟ್ಟದಲ್ಲಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಬಳಿಕ ತಹಶೀಲ್ದಾರ್, ಜಿಲ್ಲಾಧಿಕಾರಿ ಮೂಲಕ ವೇದವಲ್ಲಿ, ಪದ್ಮಲತಾ, ಆನೆ ಮಾವುತ ನಾರಾಯಣ, ಸಹೋದರಿ ಯಮುನಾ ಮತ್ತು ಸೌಜನ್ಯ ಪ್ರಕರಣಗಳಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ, ಎಸ್ಐಟಿ ತನಿಖೆ ನ್ಯಾಯಯುತವಾಗಿ ನಡೆಸಲು ಮತ್ತು ಸೌಜನ್ಯ ಪರ ಹೋರಾಟಗಾರರ ಮೇಲಿನ ದೌರ್ಜನ್ಯ ನಿಲ್ಲಿಸಲು ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ.

ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಅಕ್ಟೋಬರ್ 9 ರಂದು ಬೆಳಗ್ಗೆ 10 ಘಂಟೆಗೆ “ಧರ್ಮಸ್ಥಳ ದೌರ್ಜನ್ಯಗಳು – ಇತಿಹಾಸ ಮತ್ತು ವರ್ತಮಾನ” ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಹೋರಾಟಗಾರರು ಭಾಗವಹಿಸಲಿದ್ದಾರೆ‌ ಎಂದು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ.