ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೋಲೀಸರು ದಸ್ತಗಿರಿ ಮಾಡಿ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ಫಿಯಾಗಿರುತ್ತಾರೆ.

23-10-2025 ರಂದು ರಾತ್ರಿ ಸುಮಾರು 10:30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿoದ ಇರಿದು ಕೊಲೆಗೆ ಯತ್ನಿಸಿದ್ದು, ಈ ಪೈಕಿ ಕೊಲೆ ಯತ್ನ ಪ್ರಕರಣದಲ್ಲಿ ಬಾಗಿಯಾದ ಆರೋಪಿಗಳಾದ ಸುಶಾಂತ್ @ ಕಡವಿ, ಕಟ್ಲ ಮನೆ ಕಾನಾ. ಕೆ ವಿ ಅಲೆಕ್ಸ್ ಬೈಕಲ ಮನೆ, ಕಾನಾ ಕಟ್ಲ, ನಿತಿನ್ ಶಿವಕೃಪಾ ಇಂದಿರಾ ಕಟ್ಟೆ, ಸುರತ್ಕಲ್ ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟ ವ್ಯಕ್ತಿ ಆರುಣ್ ಶೆಟ್ಟಿ, ವಿದ್ಯಾನಗರ ರಸ್ತೆ, ಕುಳಾಯಿಗುಡ್ಡೆ, ಹೊನ್ನಕಟ್ಟೆ ಎಂಬವರನ್ನು ವಶಕ್ಕೆ ಪಡೆದುಕೊಳ್ಳಲಾಗಿರುತ್ತದೆ. ಈ ಪೈಕಿ ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಅಶ್ರಯ ನೀಡಿದ ಅಶೋಕ್ ಎಂಬಾತನು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಸುರತ್ಕಲ್ ಪೊಲೀಸ್ ಠಾಣಾ ನಿರೀಕ್ಷಕರಾದ ಪ್ರಮೋದ್ ಕುಮಾರ್ ಪಿ ರವರ ನೇತೃತ್ವದಲ್ಲಿ ಪಿಎಸ್ಐ ಗಳಾದ ರಾಘವೇಂದ್ರ ನಾಯ್ಕ್, ಜನಾರ್ಧನ ನಾಯ್ಕ್, ಶಶಿಧರ ಶೆಟ್ಟಿ, ಎಎಸ್.ಐ ರವರಾದ ರಾಜೇಶ್ ಆಳ್ವ, ತಾರನಾಥ, ರಾಧಾಕೃಷ್ಣ, ಹಾಗೂ ಸಿಬ್ಬಂದಿಯವರು ಆರೋಪಿಗಳ ಪತ್ತೆಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
