ಮಂಗಳೂರು ತಾಲೂಕು ಪಂಚಾಯತ್ ಮಾಜಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಮುಹಮ್ಮದ್ ಸಿರಾಜ್ ಉಳಾಯಿಬೆಟ್ಟು ಅಲ್ಪಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಸಿರಾಜುದ್ದೀನ್ ‘ಸಿರಾಜ್ ಮೋನು’ ಎಂದೇ ಜನಪ್ರಿಯರಾಗಿದ್ದರು. ಪ್ರಸ್ತುತ ಗುರುಪುರ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡರಾಗಿಯೂ ಗುರುತಿಸಿಕೊಂಡಿದ್ದರು.

ವೃತ್ತಿಯಲ್ಲಿ ಮಾವಿನ ವ್ಯಾಪಾರ ನಡೆಸುತ್ತಿದ್ದ ಸಿರಾಜುದ್ದೀನ್ ಎಲ್ಲರೊಂದಿಗೆ ಅತ್ಯಂತ ಆಪ್ತತೆಯಿಂದ ಬೆರೆಯುತ್ತಿದ್ದರು. ರಾಜಕಾರಣದ ಬಗ್ಗೆ ಹೆಚ್ಚು ಮಹತ್ವಾಕಾಂಕ್ಷೆಯನ್ನು ಹೊಂದಿದ್ದರು. ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಅವಧಿಯಲ್ಲಿ ಕ್ಷೇತ್ರದಾದ್ಯಂತ ಜನಪ್ರಿಯರಾಗಿದ್ದರು. ಸಾದು ಸ್ವಭಾವಿಯಾಗಿದ್ದ ಸಿರಾಜ್ ಮೋನು ರವರ ವ್ಯಕ್ತಿತ್ವ ಎಲ್ಲರನ್ನೂ ಆಕರ್ಷಿಸುತ್ತಿತ್ತು. ಸ್ನೇಹಪರ ವ್ಯಕ್ತಿತ್ವ ಹೊಂದಿದ್ದ ಸಿರಾಜುದ್ದೀನ್ ರವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ.
