ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ದ ಪ್ರಕರಣ ದಾಖಲು.

ಕರಾವಳಿ

ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಾಡಿದ ಭಾಷಣ ಧಾರ್ಮಿಕ ದ್ವೇಷ ಪ್ರಚೋದಿಸುವ, ಮಹಿಳೆಯರ ಘನತೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕ ಶಾಂತಿಗೆ ಅಪಾಯ ಉಂಟುಮಾಡುವಂತಿದೆ ಅವರು ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖ ಮಾಡಿ ಧಾರ್ಮಿಕ ವೈಮನಸ್ಸು ಉಂಟುಮಾಡಿದ್ದಾರೆ. ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಂಡಿರುವುದಾಗಿದೆ ಎಂದು ದೂರುದಾರರಾದ ಪುತ್ತೂರು ತಾಲೂಕು ಈಶ್ವರಿ ಪದ್ಮುಂಜ ಎಂಬವರು ದೂರು ನೀಡಿರುತ್ತಾರೆ.

ಅವರ ದೂರಿನ್ವಯ ದಿನಾಂಕ: 25-10-2025 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 118/2025, ಭಾರತೀಯ ನ್ಯಾಯ ಸಂಹಿತೆ (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.