ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ; ಪಿಎಫ್ಐ ಮಾಜಿ ಸದಸ್ಯ ಸೇರಿದಂತೆ 11 ಮಂದಿಯ ವಿರುದ್ಧ NIA ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಕೆ

ಕರಾವಳಿ

ಮಂಗಳೂರಿನ ಬಜ್ಜೆಯ ಕಿನ್ನಿಪದವು ಬಳಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ನಿಷೇಧಿತ ಸಂಘಟನೆ ಪ್ಯಾಫುಲರ್‌ಫ್ರಂಟ್‌ ಆಫ್ ಇಂಡಿಯಾದ ಮಾಜಿ ಸದಸ್ಯ ಸೇರಿದಂತೆ 11 ಮಂದಿಯ ವಿರುದ್ಧ NIA ಕೋರ್ಟ್ ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಪರ ಸಂಘಟನೆಗಳ ಸಂಘಟನೆಯಲ್ಲಿ ರೌಡಿ ಸುಹಾಸ್ ಸಕ್ರಿಯನಾಗಿದ್ದ. ಈತನ ಚಟುವಟಿಕೆಗೆ ಕಡಿವಾಣ ಹಾಕಲು ಆರೋಪಿಗಳು ಸಂಚು ರೂಪಿಸಿ ಸುಹಾಸ್ ಶೆಟ್ಟಿಯನ್ನು ಮೇ. ಒಂದರಂದು ಆತನ ಮೇಲೆ ಭೀಕರವಾಗಿ ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಈ ಕೃತ್ಯದ ಮೂಲಕ ಸಮಾಜದಲ್ಲಿ ಭೀಕರ ಭೀತಿಯನ್ನು ಸೃಷ್ಟಿಸಿ ಸಮಾಜದ ಗಮನ ಸೆಳೆಯುವುದಾಗಿತ್ತು ಎಂದು ಎನ್‌ಐಎ ತನ್ನ ವರದಿಯಲ್ಲಿ ತಿಳಿಸಿದೆ.

ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಜೂನ್‌ 8ರಂದು ಎನ್‌ಐಎಗೆ ವರ್ಗಾಯಿಸಿತ್ತು. ಎನ್‌ಐಎ ಅಧಿಕಾರಿಗಳ ತಂಡ ಮಂಗಳೂರಿಗೆ ಆಗಮಿಸಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಪವನ್ ಕುಮಾರ್ ತನಿಖೆಯ ನೇತೃತ್ವ ವಹಿಸಿದ್ದರು. ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಎನ್‌ಐಎ ತನಿಖೆ ನಡೆಸಿತ್ತು. ಇದೀಗ ನಿಷೇಧಿತ ಸಂಘಟನೆ ಪ್ಯಾಫುಲರ್‌ಫ್ರಂಟ್‌ ಆಫ್ ಇಂಡಿಯಾದ ಮಾಜಿ ಸದಸ್ಯ ಸೇರಿದಂತೆ 11 ಮಂದಿ ವಿರುದ್ಧ NIA ಕೋರ್ಟ್ ಗೆ ಆರೋಪ ಪಟ್ಟಿಯನ್ನು ಸಲ್ಲಿಸಿದೆ.

ರೌಡಿ ಶೀಟರ್ ಸುಹಾಸ್ ಶೆಟ್ಟಿ ಮೇಲೆ ಬಜ್ಪೆ ಪೊಲೀಸ್‌ ಠಾಣೆಯಲ್ಲಿ 2016ರಲ್ಲಿ ಪ್ರಕರಣ ದಾಖಲಾಗಿ ಅ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾದ ಪ್ರಕರಣದಲ್ಲಿ ಆತನಿಗೆ ಶಿಕ್ಷೆಯಾಗಿದೆ. ಬಜ್ಪೆ ಪೊಲೀಸ್ ಠಾಣೆಯಲ್ಲಿ 2020ರಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣವು ಈಗಾಗಲೇ ವಿಚಾರಣಾ ಹಂತದಲ್ಲಿದೆ. 2022ರಲ್ಲಿ ಸುರತ್ಕಲ್ ಠಾಣೆಯಲ್ಲಿ ದಾಖಲಾದ ಫಾಝಿಲ್ ಕೊಲೆ ಪ್ರಕರಣವು ವಿಚಾರಣಾ ಹಂತದಲ್ಲಿದೆ. ದಲಿತ ಯುವಕ ಕೀರ್ತಿ ಮತ್ತು ಮುಸ್ಲಿಂ ಯುವಕ ಫಾಝಿಲ್ ಕೊಲೆ ಸಹಿತ ಹಲವು ಪ್ರಕರಣಗಳ ಆರೋಪಿಯಾಗಿದ್ದ ಹತ್ಯೆಗೊಳಗಾದ ಸುಹಾಸ್ ಶೆಟ್ಟಿ.