ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ, 810 ಗ್ರಾಂ ಗಾಂಜಾ ವಶ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು.

ಕರಾವಳಿ

ಬಂಟ್ವಾಳ: ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ದಿನಾಂಕ: 13.12.2025 ರಂದು ಸಂಜೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಬಂಟ್ವಾಳ ಪೊಲೀಸ್ ಉಪ-ನಿರೀಕ್ಷಕರು ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಒಬ್ಬಾತ ಬಂಟ್ವಾಳ ತುಂಬೆ ನಿವಾಸಿ ಸಮೀರ್ ಮತ್ತು ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ ಎಂಬುದಾಗಿ ತಿಳಿಸಿರುತ್ತಾರೆ.

ಆರೋಪಿಗಳನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸಿದಾಗ ತಾವುಗಳು ಅಧಿಕ ಹಣಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕ ವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಸ್ವಯಂ ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿರುತ್ತದೆ.

ಆರೋಪಿಗಳೊಂದಿಗೆ ವಾಹನಗಳನ್ನು ಹಾಗೂ 810 ಗ್ರಾಂ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಪೊಲೀಸರು ಸ್ವಾಧೀನಪಡಿಸಿ, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ : 183/2025 ರಂತೆ ಪ್ರಕರಣದ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.