ದೇಶದಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿ ಮುಂದುವರೆದಿದೆ. ಕಳೆದ ಎರಡೂವರೆ ವರ್ಷದಲ್ಲಿ ಒಟ್ಟು 2809 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿ ಇಲಾಖೆ ಪ್ರಕಾರ 2023-24 ರಲ್ಲಿ 1,254 ರೈತರು, 2024-25 ರಲ್ಲಿ 1178 ರೈತರು, 2025 ನವೆಂಬರ್ ವರೆಗೆ 377 ರೈತರ ಆತ್ಮಹತ್ಯೆ ಕೇಸು ವರದಿಯಾಗಿದೆ.
ದೇಶದಲ್ಲಿ ಇದೀಗ ಕರ್ನಾಟಕ ರಾಜ್ಯ ಅನ್ನದಾತರ ಆತ್ಮಹತ್ಯೆಯಲ್ಲಿ ಎರಡನೇ ಸ್ಥಾನ ಪಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲಾವಾರು ನೋಡುವುದಾದರೆ ಕಳೆದ ಎರಡೂವರೆ ವರ್ಷಗಳಲ್ಲಿ ಹಾವೇರಿ ಜಿಲ್ಲೆ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಮೊದಲ ಸ್ಥಾನದಲ್ಲಿದೆ. ಆನಂತರ ಬೆಳಗಾವಿ, ಕಲಬುರ್ಗಿ, ಧಾರವಾಡ ಜಿಲ್ಲೆಗಳಿವೆ.
ಒಂದೆಡೆ ಬರ, ಇನ್ನೊಂದೆಡೆ ಅತಿವೃಷ್ಟಿಗೆ ಬೆಲೆ ನಷ್ಟ, ಬೆಲೆ ಕುಸಿತ ಹಾಗೂ ಸಾಲದ ಶೂಲಕ್ಕೆ ಸಿಲುಕಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
