ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. 2026ರಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಈ ತೀರ್ಮಾನ ಕೈಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸಭೆ ಚುನಾವಣೆ ನಡೆಯುವ ಐದು ರಾಜ್ಯಗಳಿಗೆ ಎಐಸಿಸಿ ಹಿರಿಯ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶವನ್ನು ಹೊರಡಿಸಿದ್ದಾರೆ.
ಕರ್ನಾಟಕದಿಂದ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರಿಗೆ ಉಸ್ತುವಾರಿಯನ್ನು ಕೊಡಲಾಗಿದೆ. ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅಸ್ಸಾಂ ರಾಜ್ಯದ ಎಐಸಿಸಿ ಹಿರಿಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಈ ವರ್ಷ ಅಸ್ಸಾಂ ರಾಜ್ಯದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಹಾಲಿ ರಾಜ್ಯದಲ್ಲಿದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಕರ್ನಾಟಕದ ಇಬ್ಬರು ನಾಯಕರಿಗೆ ಮಾತ್ರ ಜವಾಬ್ದಾರಿ ವಹಿಸಲಾಗಿದೆ.
