ಇಂಡಿಯನ್ ಸೆಕ್ಯುಲರ್ ಲಾರ್ಜೆಸ್ಟ್ ಅಸೆಂಬ್ಲಿ ಆಫ್ ಮಹಾರಾಷ್ಟ್ರ(ಇಸ್ಲಾಂ) ಪಕ್ಷವು ನಾಸಿಕ್ ಜಿಲ್ಲೆಯ ಮಾಲೆಗಾಂವ್ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ನಗರಸಭೆಯ ಒಟ್ಟು 84 ಸ್ಥಾನಗಳಲ್ಲಿ 35 ಸ್ಥಾನಗಳನ್ನು ಇಸ್ಲಾಂ ಪಕ್ಷ ಗೆದ್ದಿದ್ದರೆ, ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) 21 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 18 ಸ್ಥಾನಗಳನ್ನು ಪಡೆದಿದ್ದು, ಸಮಾಜವಾದಿ ಪಕ್ಷಕ್ಕೆ ಐದು ಮತ್ತು ಕಾಂಗ್ರೆಸ್ಗೆ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಮುಸ್ಲಿಂ ಪ್ರಾಬಲ್ಯದ ಈ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ ಕೇವಲ ಎರಡು ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ.
