ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಕರಾವಳಿ

ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಚನ್ನರಾಯಪಟ್ಟಣದ ಬೆಳಗಿಹಳ್ಳಿಯ ಚಂದ್ರೆಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 60/2009, ರಂತೆ ದಾಖಲಾದ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ವಂಚಿಸಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ಮೂಲದ ನಿವಾಸಿ S. N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 20/01/2026 ರಂದು ಮಾನ್ಯ ನ್ಯಾಯಾಲಯಕ್ಕೆ ಬೆಳ್ತಂಗಡಿ ಪೊಲೀಸರು ಹಾಜರುಪಡಿಸಿರುತ್ತಾರೆ.