ಕಂಕನಾಡಿ ನಗರ ಪೊಲೀಸರ ಕಾರ್ಯಾಚರಣೆ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ

ಕರಾವಳಿ

ವಂಚನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಕೊಲ್ಲಂ ನಿವಾಸಿ ಜಯಚಂದ್ರ.

2019ರಲ್ಲಿ ಈತನ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನಾಪತ್ತೆಯಾಗಿದ್ದ.ನ್ಯಾಯಾಲಯ ಆತನ ವಿರುದ್ಧ ವಾರಂಟ್ ಹೊರಡಿಸಿತ್ತು. ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಎನ್ನುವ ದೋಷಾರೋಪಣೆ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಪೊಲೀಸರು ಈತನನ್ನು ಕೇರಳದ ಕೊಲ್ಲಂ ನಗರದ ವಟ್ಟಕುಟ್ಟು ಲಲಿತಾ ಮಂದಿರಂನ ಆರೋಪಿಯ ಮನೆಯಲ್ಲಿ ಪೆ.3ರಂದು ವಶಕ್ಕೆ ಪಡೆದು ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.