ಜಾತಕದ ನೆಪ; ಎಸ್‌ಸಿ ಸಮುದಾಯದ ಯುವತಿಗೆ ದೇವಸ್ಥಾನದ ಅರ್ಚಕನಿಂದ ಲೈಂಗಿಕ ದೌರ್ಜನ್ಯ, ಪ್ರಕರಣ ದಾಖಲು

ರಾಜ್ಯ

ಮದುವೆ ಜಾತಕ ತೋರಿಸುವ ನೆಪದಲ್ಲಿ ಎಸ್‌ಸಿ ಸಮುದಾಯದ ಯುವತಿಗೆ ದೇವಾಲಯದ ಅರ್ಚಕನಿಂದ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಮೂಡಿಗೆರೆ ಪರಿಸರದಲ್ಲಿ ಬೆಳಕಿಗೆ ಬಂದಿದೆ.
ಹೊರಟ್ಟಿ ಗ್ರಾಮದ ಪಾರ್ವತಿ ಈಶ್ವರ ದೇವಸ್ಥಾನದ ಅರ್ಚಕ ಕೃಷ್ಣ ರಾವ್ ವಿರುದ್ಧ ಬಣಕಲ್ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣ ದಾಖಲಾಗಿದೆ. 23 ವರ್ಷದ ಎಸ್‌ಸಿ ಸಮುದಾಯದ ಯುವತಿ ನೀಡಿರುವ ದೂರಿನಂತೆ, ಮದುವೆಯಲ್ಲಿ ತೊಂದರೆ ಆಗುತ್ತದೆ ಎಂದು ಹೆದರಿಸಿ ಆರೋಪಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

2025ರ ನವೆಂಬರ್ 23ರಿಂದ 2026ರ ಫೆಬ್ರವರಿ 2ರವರೆಗೆ ಹಲವು ಬಾರಿ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ 02 ಫೆಬ್ರವರಿ 2026ರಂದು ಮಧ್ಯಾಹ್ನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅರ್ಚಕನ ವಿರುದ್ಧ BNS ಕಲಂ 64(2)(m) ಹಾಗೂ ಎಸ್‌ಸಿ/ಎಸ್‌ಟಿ ಅತ್ಯಾಚಾರ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.