ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 106 ಕೆ.ಜಿ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ ಎಂಬವರನ್ನು ಈ ಮೊದಲೇ ದಸ್ತಗಿರಿ ಮಾಡಲಾಗಿದ್ದು, ಆರೋಪಿಗಳಿಗೆ ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ಮೂಲದ ದೀಪಕ್ ಪಾತ್ರ ಎಂಬಾತನನ್ನು ಪುತ್ತೂರು ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ನೇತೃತ್ವದ ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ಆತನನ್ನು ಬಂಧಿಸಿ, ಆತನಿಂದ 1 ಕೆ.ಜಿ 788 ಗ್ರಾಂ ಗಾಂಜಾ ವಶಪಡಿಸಿಕೊಂಡಿರುತ್ತಾರೆ.
ಪುತ್ತೂರು ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ, ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ರವರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
