ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟ ಮಾಡಲು ಯತ್ನಿಸಿದ ಮೂವರ ಬಂಧನ.

ಕರಾವಳಿ

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಸ್ವೀಪ್ಟ್ ಕಾರಿನಲ್ಲಿ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮಾದಕ ವಸ್ತು ಸಮೇತ ಸ್ವೀಪ್ಟ್ ಕಾರನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ

ಬಂಧಿತರನ್ನು ಮುಸ್ತಫಾ ಸೀದಿಯಬ್ಬ, ಉಳ್ಳಾಲ. ಮೈಯದ್ದಿ, ಉಳ್ಳಾಲ. ಮೊಹಮ್ಮದ್ ಶಿಫಾನ್, ಮುಕ್ಕಚೇರಿ, ಉಳ್ಳಾಲ, ಮಂಗಳೂರು. ಎಂಬವರನ್ನು ವಶಕ್ಕೆ ಪಡೆದು, ರೂ.11 ಲಕ್ಷದ 90 ಸಾವಿರ ಮೌಲ್ಯದ 118.13 ಗ್ರಾಂ ತೂಕದ ನಿಷೇದಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್-4, ಸ್ವೀಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುತ್ತಾರೆ.

ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕವಸ್ತು ಮಾರಾಟ, ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಪತ್ತೆ ಕಾರ್ಯಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.