ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ಅಧಿಕ ಲಾಭಂಶ ನೀಡುವುದಾಗಿ ನಂಬಿಸಿ ಸುಮಾರು ಒಂದು ಕೋಟಿ 20 ಲಕ್ಷ ರೂಪಾಯಿ ವಂಚನೆ ಮಾಡಿರುವ ಬೆಂಗಳೂರು ಮೂಲದ ಆರೋಪಿತನ ಮೇಲೆ ಉಳ್ಳಾಲ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿತ್ತು. Nano Forex India ಎಂಬ ಸಂಸ್ಥೆಯ forex Robot Software ಮೂಲಕ ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ತಿಂಗಳಿಗೆ 40% ಲಾಭ ಹಾಗೂ 20% ಮರುಪಾವತಿ ನೀಡುವುದಾಗಿ ನಂಬಿಸಿ, ಐಡಿ ಕಾರ್ಡ್ ಮತ್ತು ದಾಖಲೆಗಳನ್ನು ನೀಡಿ ವಿಶ್ವಾಸ ಹುಟ್ಟಿಸಿ, ಪ್ರೊರೆಕ್ಸ್ ರೋಬೋಟ್ ಸಾಫ್ಟ್ವೇರ್ ಬಳಸಲು ಅವಕಾಶ ನೀಡುವುದಾಗಿ ತಿಳಿಸಿ, ವಿವಿಧ ಗ್ರಾಹಕರಿಂದ ಸುಮಾರು ಒಂದು ಕೋಟಿ 20 ಲಕ್ಷ ಹಣವನ್ನು ಪಡೆದುಕೊಂಡಿರುತ್ತಾರೆ. ಆದರೆ ಹಣಕ್ಕೆ ಯಾವುದೇ ಲಾಭ ಅಥವಾ ಮರುಪಾವತಿ ನೀಡದೇ, ಹಣವನ್ನು ದುರುಪಯೋಗಪಡಿಸಿ ವಂಚನೆ ನಡೆಸಿರುವುದಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2011 ನೇ ಸಾಲಿನಲ್ಲಿ 3 ಪ್ರಕರಣಗಳು ದಾಖಲಾಗಿತ್ತು..
ಪ್ರಕರಣದ ತನಿಖೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಜಯ್ ಪ್ರಸಾದ್ ಜಿ, ಪ್ರಾಯ: 41 ವರ್ಷ ವಾಸ: ಉಪ್ಕಾರ್ ಲೇ ಔಟ್, ವಿಶ್ವನಿಧಂ, ಬೆಂಗಳೂರು ಎಂಬಾತನನ್ನು ದಿನಾಂಕ 20-02-2026 ಉಳ್ಳಾಲ ಪೊಲೀಸರ ತಂಡವು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಮಂಗಳೂರು ನಗರದ ಮಾನ್ಯ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.
