ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಮಾರಾಟ ಮಾಡಲು ಹೊರ ರಾಜ್ಯದಿಂದ ತಂದಿರುವ ಅಕ್ರಮ ಗಾಂಜಾದ ಬಗ್ಗೆ ಖಚಿತ ಮಾಹಿತಿ ಪಡೆದ ಉತ್ತರ ಉಪ-ವಿಭಾಗದ ಎ.ಸಿ.ಪಿ. ಶ್ರೀಕಾಂತ್ ಮತ್ತು ಅವರ ತಂಡದ ಅಧಿಕಾರಿಗಳು ಹಾಗೂ ಪಣಂಬೂರು ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿ 22.250 ಗಾಂಜಾದೊಂದಿಗೆ ಆರೋಪಿತರಾದ ಕರಣ್ ಬಾಬು ರಾಂ ಜಾದವ್ ಮಹಾರಾಷ್ಟ್ರ , ಸಮೀರ್ ಶಾ ಮಧ್ಯಪ್ರದೇಶ, ಎಂ.ಹೆಚ್. ಮಯ್ಯದಿ ಹೆಜಮಾಡಿ ಗ್ರಾಮ, ಉಡುಪಿ, ಇಬ್ರಾಹಿಂ ಕಲೀಲ್ ಕರ್ಬಾಲ ರೋಡ್, ನಡುಪಳ್ಳಿ ಕುದ್ರೋಳಿ, ಮಂಗಳೂರು. ಎಂಬವರನ್ನು ದಸ್ತಗಿರಿ ಮಾಡಿ, ಅವರ ವಶದಲ್ಲಿದ್ದ 22 ಕೆ.ಜಿ 250 ಗ್ರಾಂ ಗಾಂಜಾ ಮತ್ತು 6 ಮೊಬೈಲ್ ಪೋನ್ ಹಾಗೂ ಗಾಂಜಾ ಸಾಗಿಸಲು ಬಳಸಿದ KA 20 H.E. 2915 ಮತ್ತು K.A 19 H.P 6021 ಸ್ಕೂಟರ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ.
ಆರೋಪಿತರ ಪೈಕಿ ಕರಣ್ ಬಾಬು ರಾಂ ಜಾದವ್ ಮತ್ತು ಸಮೀರ್ ಶಾ ಎಂಬವರು ಗಾಂಜಾವನ್ನು ಮಹಾರಾಷ್ಟ್ರ ಮಯ್ಯದಿ ಹಾಗೂ ಮಧ್ಯ ಪ್ರದೇಶ ಶಾರೂಕ್ ಎಂಬವರಿಂದ ಪಡೆದು ತಂದು ಉಡುಪಿ ಹೆಜಮಾಡಿ ಕೋಡಿಯ ಎಂ.ಹೆಚ್. ಮಯ್ಯದಿ ಮತ್ತು ಮಂಗಳೂರಿನ ಇಬ್ರಾಹಿಂ ಕಲೀಲ್ ರವರಿಗೆ ನೀಡುತ್ತಿದ್ದು, ಈ ಇಬ್ಬರು ಗಾಂಜಾವನ್ನು ಉಡುಪಿ, ಮಲ್ಪೆ, ಕಾರ್ಕಳ, ಮುಲ್ಕಿ, ಸುರತ್ಕಲ್, ಪಣಂಬೂರು, ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿದು ಬಂದಿದ್ದು, ಈ ಹಿಂದೆ ಕೂಡಾ ಹಲವು ಭಾರಿ ಗಾಂಜಾವನ್ನು ಅಕ್ರಮವಾಗಿ ತಂದು ಉಡುಪಿ ಜಿಲ್ಲೆ ಮತ್ತು ಮಂಗಳೂರು ನಗರದಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿರುತ್ತಾರೆ.
ಆರೋಪಿತರಿಂದ ಸ್ವಾಧೀನಪಡಿಸಿಕೊಳ್ಳಲಾದ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಗಳ ಒಟ್ಟು ಮೌಲ್ಯ 12,30,500 ರೂ. ಆಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.21/2026 ನಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
