ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ; ಗಾಂಜಾ ಸಹಿತ ಆರೋಪಿಯ ಬಂಧನ, ಪ್ರಕರಣ ದಾಖಲು.

ಕರಾವಳಿ

ಬಂಟ್ವಾಳ ತಾಲೂಕು ಕೊಡ್ಮಾಣು ಗ್ರಾಮದ ಪಕ್ಕಳಪಾದೆ ಎಂಬಲ್ಲಿ ರಸ್ತೆ ಬದಿಯ ನಿರ್ಜನ ಪ್ರದೇಶದಲ್ಲಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಿ, ಲಾಭಗಳಿಸುವ ಉದ್ದೇಶದಿಂದ ಅಕ್ರಮವಾಗಿ ವಶದಲ್ಲಿಟ್ಟುಕೊಂಡಿರುವುದಾಗಿ ಖಚಿತ ಮಾಹಿತಿ ಮೇರೆಗೆ, ಬಂಟ್ವಾಳ ಠಾಣಾ ಪೊಲೀಸ್ ಉಪ ನಿರೀಕ್ಷಕರು ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತೆರಳಿ ಗಾಂಜಾ ಮಾರಾಟಗಾರನನ್ನು ಹಿಡಿದು ವಿಚಾರಿಸಿದಾಗ ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ ಎಂಬುದಾಗಿ ಹಾಗೂ ತಾನು ಗಾಂಜಾವನ್ನು ಶೇಖರಿಸಿಟ್ಟು ಗಿರಾಕಿಗಳಿಗೆ ಮಾರಾಟ ಮಾಡಲು ಬಂದಿರುವುದಾಗಿ ಮಾಹಿತಿ ನೀಡಿರುತ್ತಾನೆ.

ಪೊಲೀಸರ ತಪಾಸಣೆಯ ವೇಳೆ ಆತನ ಬಳಿ 180 ಗ್ರಾಂ ಗಾಂಜಾ ಪತ್ತೆಯಾಗಿರುತ್ತದೆ. ಆತನಿಗೆ ಬಂಟ್ವಾಳದ ಪಲ್ಲಮಜಲುವಿನ ಅಬ್ದುಲ್ ರಜಾಕ್ ಎಂಬಾತನು ಗಿರಾಕಿಗಳಿಗೆ ಮಾರಾಟ ಮಾಡುವಂತೆ ತಿಳಿಸಿಕೊಟ್ಟಿರುತ್ತಾರೆ ಎಂದು ಹೇಳಿರುತ್ತಾನೆ. ಕಾನೂನುಕ್ರಮಕ್ಕಾಗಿ ಪೊಲೀಸರು ಆರೋಪಿತನನ್ನು ವಶಕ್ಕೆ ಪಡೆದು, ಆತನ ಬಳಿ ಇದ್ದ ಮಾದಕವಸ್ತು, ದ್ವಿಚಕ್ರ ವಾಹನದೊಂದಿಗೆ ಸ್ವಾಧೀನಪಡಿಸಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 19/2026, ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.