ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ, ಪೋಲೀಸರ ವಶದಿಂದ ಪರಾರಿ ಪ್ರಕರಣ: ಆರೋಪಿ ರಾಘವನ್ @ ಕೋಳಿಕರಣ್ ಗೆ ಶಿಕ್ಷೆ

ಕರಾವಳಿ

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ ಕ್ರ 118/24 ಪ್ರಕರಣದಲ್ಲಿ ತನಿಖಾಧಿಕಾರಿಗಳಾಗಿದ್ದ ಸುಳ್ಯ ವೃತ್ತ ನಿರೀಕ್ಷಕರಾದ ತಿಮ್ಮಪ್ಪ ನಾಯ್ಕರವರು ಪ್ರಕರಣದ ತನಿಖೆ ನಡೆಸಿ, ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ, ಆರೋಪಿ ರಾಘವನ್ @ ಕೋಳಿಕರಣ್ ಎಂಬಾತನ ವಿರುದ್ದ ದೋಷಾರೋಪಣೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಪ್ರಕರಣದ ವಿಚಾರಣೆಯು ಸುಳ್ಯದ ಮಾನ್ಯ ಎಸ್ ಸಿ ಜೆ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ನಡೆದು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಬಿ ಮೋಹನ್ ಬಾಬುರವರು ಆರೋಪಿಗೆ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ.10,000 ಸಾವಿರ ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಮಾಡಿದ್ದಾರೆ.

ಕಲಂ 132 ರಲ್ಲಿ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಲು ಮಾಡಿದ ಹಲ್ಲೆಗಾಗಿ 1 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು ರೂ 10,000 ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ಸಾದಾ ಕಾರಾಗೃಹ ಶಿಕ್ಷೆ. ಕಲಂ262 ರಲ್ಲಿ ಕಾನೂನುಬದ್ಧವಾಗಿ ವಶಕ್ಕೆಪಡೆಯುವ ಸಂದರ್ಭದಲ್ಲಿ ತಡೆಯುಂಟು ಮಾಡಿದ್ದಕ್ಕಾಗಿ ಒಂದು ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ಮತ್ತು 10,000 ಸಾವಿರ ರೂ.ದಂಡ, ದಂಡ ಕಟ್ಟಲು ತಪ್ಪಿದ್ದಲ್ಲಿ 3 ತಿಂಗಳ ‌ಸಾದಾ ಕಾರಾಗೃಹ ಶಿಕ್ಷೆ ವಿಧಿಸಿರುತ್ತದೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕುಮಾರಿ ಪ್ರೀತಿ ಎಂ.ಸಿ ರವರು ಸಮರ್ಥವಾಗಿ ವಾದ ಮಂಡಿಸಿದ್ದರು.