ಬಂಟ್ವಾಳ: ಚಿನ್ನಾಭರಣ ಕಳವು ಪ್ರಕರಣ: ಅಂತರ್ ರಾಜ್ಯ ಕಳ್ಳನ ಬಂಧನ, 20 ಲಕ್ಷ ರೂಪಾಯಿ ಮೌಲ್ಯ ಚಿನ್ನಾಭರಣಗಳ ವಶ.

ಕರಾವಳಿ

ಬಂಟ್ವಾಳ: ಬಸ್ಸಿನಲ್ಲಿಟ್ಟಿದ್ದ ಬ್ಯಾಗ್ ನಿಂದ ಸರಿ ಸುಮಾರು 180 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ. ಕ್ರ ಸಂ:132/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ, ಆರೋಪಿತನಾದ ಮಧ್ಯಪ್ರದೇಶ ರಾಜ್ಯದ ಧಾರಾ ಜಿಲ್ಲೆಯ ಸಮದ್ ಖಾನ್ ಎಂಬಾತನನ್ನು ಬಂಟ್ವಾಳ ಪೊಲೀಸರು ದಸ್ತಗಿರಿ ಮಾಡಿ, ಆರೋಪಿತನಿಂದ ಕಳ್ಳತನ ಮಾಡಿದ ಅಂದಾಜು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಉಪ-ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐಪಿಎಸ್. ರವರ ನಿರ್ದೇಶನದಂತೆ, ಪ್ರಕರಣದ ತನಿಖಾಧಿಕಾರಿಯಾದ ಅನಂತ ಪದ್ಮನಾಭ ಕೆ.ವಿ, ಬಂಟ್ವಾಳ ನಗರ ಪೊಲೀಸ್ ನಿರೀಕ್ಷಕರು ರವರ ನೇತೃತ್ವದಲ್ಲಿ, ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವಿಜಯ್ ಕುಮಾರ್, ರಾಜೇಶ್, ಇರ್ಷಾದ್, ಬಸವರಾಜ , ಸುರೇಶ್ ಕುಮಾರ್, ವಿಜಯ್ ಕುಮಾರ್, ರೇವತಿ ಹಾಗೂ ಜಿಲ್ಲಾ ಪೊಲೀಸ್ ಘಟಕದ ಗಣಕ ಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಕುಮಾರ್ ಹಾಗೂ ದಿವಾಕರ ರವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿರುತ್ತಾರೆ