ಮಂಗಳೂರು ನಗರದಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 179/2025 ರಂತೆ ಪ್ರಕರಣ ದಾಖಲಾಗಿ ತನಿಖೆಯ ಹಂತದಲ್ಲಿತ್ತು.
ತನಿಖೆಯ ಸಮಯದಲ್ಲಿ TN- MADDY ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ವ್ಯಕ್ತಿಯು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪವನ್ ಆಚಾರ್ಯ, ತಂದೆ : ಬಾಲಕೃಷ್ಣ, ಮೂಡುಬೆಳ್ಳೆ ಗ್ರಾಮ ಎಂದು ತನಿಖೆಯಲ್ಲಿ ಕಂಡು ಬಂದಿದ್ದು, ದಿನಾಂಕ 25-03-2026 ರಂದು ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿರುತ್ತದೆ.
ಆರೋಪಿತನು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಮಾಡಿದ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಅ.ಕ್ರ: 95/2025 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.
